ETV Bharat / state

ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ 'ಪ್ರಶಂಸನಾ ಪತ್ರ' ಪಡೆದ ವೈದ್ಯಾಧಿಕಾರಿ! - ವಿಚಾರಣೆ ನಡೆಸಬಂದ ಅಧಿಕಾರಿಯಿಂದ ವೈದ್ಯಾಧಿಕಾರಿಗೆ ಸನ್ಮಾನ

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಭಟ್ಕಳದ ತಾಲೂಕು ಆಸ್ಪತ್ರೆಗೆ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ಆಗಮಿಸಿತ್ತು. ಈ ವೇಳೆ ವೈದ್ಯಾಧಿಕಾರಿಯ ಕಾರ್ಯವೈಖರಿ ಕಂಡು ಅಧಿಕಾರಿಗಳು ಅಭಿನಂದಿಸಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆದಿದೆ.

ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ಪ್ರಶಂಸನಾ ಪತ್ರ ಪಡೆದ ವೈದ್ಯಾಧಿಕಾರಿ
Doctor received commendation from the authorities who came to inquire
author img

By

Published : Apr 8, 2021, 8:47 AM IST

ಭಟ್ಕಳ: ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ವೈದ್ಯಾಧಿಕಾರಿಯ ವಿಚಾರಣೆ ನೆಡೆಸಲು ಬಂದ ಅಧಿಕಾರಿಗಳು ವೈದ್ಯರ ಉತ್ತಮ ಕಾರ್ಯ ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ತಾಲೂಕು ವೈದ್ಯಾಧಿಕಾರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ ಅಪರೂಪದ ಘಟನೆ ಭಟ್ಕಳದಲ್ಲಿ ನಡೆದಿದೆ.

ವಿಚಾರಣೆ ನಡೆಸಲು ಬಂದ ಅಧಿಕಾರಿಗಳಿಂದಲೇ ಪ್ರಶಂಸನಾ ಪತ್ರ ಪಡೆದ ವೈದ್ಯಾಧಿಕಾರಿ

ಭಟ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ಅವರ ವಿರುದ್ಧ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಅಲ್ಲಿನ ನಿವಾಸಿ ಈಶ್ವರ ನಾಯ್ಕ್​​ ಎಂಬುವವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದ ತಂಡ ತಾಲೂಕು ಆಸ್ಪತ್ರೆಗೆ ಆಗಮಿಸಿ ತನಿಖೆ ನಡೆಸುತ್ತಿತ್ತು. ಈ ವಿಷಯ ತಿಳಿದು ಆಸ್ಪತ್ರೆಗೆ ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.

ವೈದ್ಯಾಧಿಕಾರಿ ಡಾ.ಸವಿತಾ ಕಾಮತ್​​​ರವರು ಭಟ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಂಡು ಬಂದಾಗ ಆಸ್ಪತ್ರೆಯಲ್ಲಿ ಯಾವುದೇ ಮೂಲಭೂತ ವ್ಯವಸ್ಥೆ ಇಲ್ಲದೆ ಹಾಳು ಬಿದ್ದಿತ್ತು. ಹಗಲು ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸಿ ನಾಯಿಗಳ ವಾಸಸ್ಥಾನವಾಗಿದ್ದ ತಾಲೂಕು ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಮಾಡಿದ್ದರು. ಕೆಲಸ ಮುಗಿದರೂ ರೋಗಿಗಳೊಂದಿಗೆ ಇದ್ದು ಅವರ ಯೋಗಕ್ಷೇಮ ನೋಡಿಕೊಳ್ಳುತಿದ್ದರು. ಇದಲ್ಲದೇ ಕೋವಿಡ್ ಸಂದರ್ಭದಲ್ಲಿ ತಮಗೂ ಸೋಂಕು ಬಂದರೂ ಕಾರ್ಯವನ್ನು ಮರೆತಿರಲಿಲ್ಲ. ಜನರ ಪ್ರೀತಿ ಗಳಿಸಿದ್ದ ವೈದ್ಯೆ ಎಲ್ಲರ ಅಚ್ಚುಮೆಚ್ಚಿನ ತಾಯಿಯಾಗಿದ್ದರು ಎಂದು ಸಾರ್ವಜನಿಕರು ಕೊಂಡಾಡಿದ್ದಾರೆ.

ಇದನ್ನೂ ಓದಿ: ನೋ ವರ್ಕ್ ನೋ ಪೇ: ಸಾರಿಗೆ ನೌಕರರಿಗೆ ನೋಟಿಸ್ ಜಾರಿ ಮಾಡಿದ ಕಿಪ್ಕೋ

ಹೀಗಿರುವಾಗ ಇವರ ಬಳಿಯೇ ಕೆಲಸ ಮಾಡುತ್ತಿದ್ದ ಈಶ್ವರ್ ನಾಯ್ಕ್​​ ಎಂಬಾತ ಬೇಡದೆ ಇರುವ ಕೆಲಸ ಮಾಡಿದ್ದಕ್ಕೆ ಹೊರ ಹಾಕಿದ್ದರಿಂದ ಸೇಡು ತೀರಿಸಿಕೊಳ್ಳಲು ತನ್ನ ಪ್ರಭಾವ ಬಳಸಿ ಅಧಿಕಾರಿಗಳನ್ನು ಚೂ ಬಿಟ್ಟಿದ್ದ. ಇನ್ನು ಆಸ್ಪತ್ರೆಯಲ್ಲಿ ನೂರಾರು ಜನ ಸೇರಿ ವೈದ್ಯರ ತನಿಖೆಗೆ ವಿರೋಧ ವ್ಯಕ್ತಪಡಿಸಿದ್ದರು. ಒಂದು ವೇಳೆ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾದರೆ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದರು.

ನಂತರ ಅಧಿಕಾರಿಗಳು ವೈದ್ಯಾಧಿಕಾರಿ ಮಾಡಿದ ಕೆಲಸಗಳನ್ನು ಪರಿಶೀಲಿಸಿ ಅವರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಮರಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.