ETV Bharat / state

ಉತ್ತರ ಕನ್ನಡಕ್ಕೆ ಮೊದಲ ಮಹಿಳಾ ಎಸ್​ಪಿಯಾಗಿ ಡಾ.ಸುಮನ್ ಡಿ.ಪೆನ್ನೇಕರ್ ನೇಮಕ - karwar

ಡಾ.ಸುಮನ್ ಡಿ.ಪೆನ್ನೇಕರ್ ಅವರು ಉತ್ತರ ಕನ್ನಡದ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್‌ಪಿಯಾಗಿ ನೇಮಕವಾಗಿರಲಿಲ್ಲ.

Dr. Suman D. Pennekar
ಎಸ್​ಪಿ ಡಾ.ಸುಮನ್ ಡಿ.ಪೆನ್ನೇಕರ್
author img

By

Published : Oct 31, 2021, 12:41 PM IST

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್​​ ದೇವರಾಜು ವರ್ಗಾವಣೆಗೊಂಡಿದ್ದು, ಜಿಲ್ಲೆಗೆ ಇದೀಗ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಯಾಗಿದ್ದ ಡಾ.ಸುಮನ್ ಡಿ.ಪೆನ್ನೇಕರ್ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್​​ ದೇವರಾಜು ಅವರನ್ನು ಗದಗ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

2019ರ ಆಗಸ್ಟ್​​​ನಲ್ಲಿ ಉತ್ತರ ಕನ್ನಡಕ್ಕೆ ನೇಮಕಗೊಂಡಿದ್ದ ಶಿವಪ್ರಕಾಶ್ ದೇವರಾಜು, ದಶಕಗಳಷ್ಟು ಹಳೆಯ ಪ್ರಕರಣಗಳಿಗೆ ಸಂಬಧಿಸಿದಂತೆ ಆರೋಪಿಗಳ ಬಂಧನ, ಅಕ್ರಮ ಜಾನುವಾರು ಸಾಗಣೆಗೆ ಬ್ರೇಕ್ ಹಾಕುವ ಕಾರ್ಯ, ಓಸಿ ಮಟ್ಕಾಕ್ಕೆ ಕಡಿವಾಣ ಸೇರಿದಂತೆ ಹೀಗೆ ಹತ್ತು ಹಲವು ಕಾರ್ಯಗಳ ಮೂಲಕ ಗಮನ ಸೆಳೆದಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್​​ ದೇವರಾಜು
ವರ್ಗಾವಣೆಯಾದ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್​​ ದೇವರಾಜು

ಈ ನಡುವೆ ಕಳೆದ ಮೂರು ತಿಂಗಳ ಹಿಂದೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿ ಜಿಲ್ಲೆಗೆ ಉತ್ತರ ಪ್ರದೇಶ ಮೂಲದ 2010ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ನೇಮಕಗೊಳಿಸಲಾಗಿತ್ತು. ಆದರೆ ಆ ಆದೇಶದಲ್ಲಿ ಶಿವಪ್ರಕಾಶ್ ದೇವರಾಜು ಅವರನ್ನು ವರ್ಗಾಯಿಸಿ ಸ್ಥಳ ನಿಯುಕ್ತಿ ಮಾಡಿರಲಿಲ್ಲ. ಅಂತಿಮವಾಗಿ ಆದೇಶ ಜಾರಿಯಾಗದೆ, ವರ್ತಿಕಾ ಅವರನ್ನು ಮಂಡ್ಯಕ್ಕೆ ನಿಯುಕ್ತಿಗೊಳಿಸಲಾಗಿತ್ತು. ಶಿವಪ್ರಕಾಶ್ ದೇವರಾಜು ಉತ್ತರ ಕನ್ನಡದಲ್ಲೇ ಮುಂದುವರಿದಿದ್ದರು. ಇದೀಗ ಎರಡನೇ ಬಾರಿಗೆ ವರ್ಗಾವಣೆ ಆದೇಶವಾಗಿದೆ.

ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ
ಇದೀಗ ಮಾಡಲಾದ ಆದೇಶದಂತೆ ನಿಯುಕ್ತಿಯಾದರೆ ಡಾ.ಸುಮನ್ ಡಿ.ಪೆನ್ನೇಕರ್ ಅವರು ಉತ್ತರ ಕನ್ನಡದ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್‌ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ 2012ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಡಾ.ಸುಮನ್ ಮೊದಲ ಮಹಿಳಾ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಕರ್ನಾಟಕದ ಬೆಳಗಾವಿ ಜಿಲ್ಲೆಯ ಬೀದಿ ಗ್ರಾಮದ ಡಾ.ಸುಮನ್, 2013ನೇ ಬ್ಯಾಚ್​​ನ ಐಪಿಎಸ್ ಅಧಿಕಾರಿ. ಆಯುರ್ವೇದಿಕ್ ವೈದ್ಯರಾಗಿದ್ದ, ಅವರು 2009ರಿಂದ ಯುಪಿಎಸ್​​ಸಿಗೆ ತಯಾರಿ ನಡೆಸಿದ್ದರು. 2018ನೇ ಸಾಲಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವೇಳೆ ಉಂಟಾಗಿದ್ದ ಭೂಕುಸಿತದ ಸಂದರ್ಭದಲ್ಲಿ ಅವರು ಮತ್ತವರ ತಂಡ ನಡೆಸಿದ್ದ ರಕ್ಷಣಾ ಕಾರ್ಯಕ್ಕೆ ಅಲ್ಲಿನ ಜನ ಮೆಚ್ಚಿದ್ದರು. ತಮ್ಮ ಮಗಳನ್ನು ಅಂಗನವಾಡಿಗೆ ದಾಖಲಿಸಿ ಸರಳತೆ ಮೆರೆದಿದ್ದರು. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿಯೂ ಅವರು ಕರ್ತವ್ಯ ನಿರ್ವಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.