ETV Bharat / state

ಮತದಾನಕ್ಕೆ ಅಂತಿಮ ಹಂತದ ಸಿದ್ಧತೆ: ಮತಯಂತ್ರದೊಂದಿಗೆ ಮತಗಟ್ಟೆಗೆ ತೆರಳಿದ ಚುನಾವಣಾ ಸಿಬ್ಬಂದಿ

author img

By

Published : May 9, 2023, 3:47 PM IST

Updated : May 9, 2023, 8:47 PM IST

ಕಾರವಾರದ ಸೇಂಟ್ ಮೈಕಲ್ ಕಾನ್ವೆಂಟ್ ಶಾಲೆಯಲ್ಲಿ ಇರಿಸಲಾಗಿದ್ದ ಮತಯಂತ್ರಗಳನ್ನು ಪಡೆದು ಬಿಗಿ ಭದ್ರತೆಯಲ್ಲಿ ಆಯಾ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ತೆರಳಿದ್ದಾರೆ.

election-staff-went-to-the-polling-station-with-the-evm
ಮತಯಂತ್ರದೊಂದಿಗೆ ಮತಗಟ್ಟೆಗೆ ತೆರಳಿದ ಚುನಾವಣಾ ಸಿಬ್ಬಂದಿ
ಚುನಾವಣಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಕಾರವಾರ (ಉತ್ತರ ಕನ್ನಡ): ಸಾರ್ವತ್ರಿಕ ವಿಧಾನಸಭಾ ಚುನಾವಣಾ ಮತದಾನಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದ್ದು, ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿರುವ ಅಧಿಕಾರಿಗಳು ಇಂದು ಕಾರವಾರದ ಸೇಂಟ್ ಮೈಕಲ್ ಕಾನ್ವೆಂಟ್ ಶಾಲೆಯಲ್ಲಿ ಇರಿಸಿಲಾಗಿದ್ದ ಮತಯಂತ್ರಗಳನ್ನು ಪಡೆದು ಬಿಗಿ ಭದ್ರತೆಯಲ್ಲಿ ಆಯಾ ಮತಗಟ್ಟೆಗಳಿಗೆ ತೆರಳಿದರು. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇವಿಎಂ ಹಾಗೂ ವಿವಿ ಪ್ಯಾಟ್ ಮಷಿನ್​ಗಳನ್ನು ಮಸ್ಟರಿಂಗ್ ಕೇಂದ್ರವಾಗಿದ್ದ ಕಾರವಾರ ನಗರದ ಸೇಂಟ್ ಮೈಕಲ್ ಕಾನ್ವೆಂಟ್ ಶಾಲೆಯಲ್ಲಿ ಇರಿಸಲಾಗಿತ್ತು.

ಇಂದು ಬೆಳಗ್ಗೆಯೇ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು ಪೊಲೀಸರು ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಿ ಬಳಿಕ ಇವಿಎಂ ಹಾಗೂ ವಿವಿಪ್ಯಾಟ್ ಮಷಿನ್​ಗಳನ್ನು ಪೊಲೀಸ್ ಭದ್ರತೆಯಲ್ಲಿ ಹಸ್ತಾಂತರಿಸಿದರು. ಅಲ್ಲದೆ ಮತಯಂತ್ರಗಳ ಸಾಗಾಟಕ್ಕೆ ಬಸ್ ವ್ಯವಸ್ಥೆ ಕೂಡ ಕಲ್ಪಿಸಿದ್ದು, ಸಂಜೆ ವೇಳೆಗೆ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಆಯಾ ಮತಗಟ್ಟೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಇನ್ನು ಜಿಲ್ಲೆಯಲ್ಲಿ 5,99,527 ಪುರುಷರು, 5,95,180 ಮಹಿಳೆಯರು, 7 ಇತರೆ ಸೇರಿ ಒಟ್ಟೂ 11,94,714 ಮತದಾರರಿದ್ದಾರೆ. ಇದರಲ್ಲಿ 15,070 ವಿಶೇಷಚೇತನರು, 27,399 ಮಂದಿ 80 ವರ್ಷಕ್ಕೂ ಹೆಚ್ಚು ವಯಸ್ಸದವರು ಸೇರಿ 42,469 ಮತದಾರರಿದ್ದು, ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ 4,801 ಮಂದಿ ಅಂಚೆ ಮತದಾನಕ್ಕೆ ಮನವಿ ಮಾಡಿದ್ದರು. ಅದರಂತೆ 4,582 ಮಂದಿ ಮತ ಚಲಾವಣೆ ಮಾಡಿದ್ದು ಶೇ. 95.43% ಮತದಾನ ದಾಖಲಾಗಿದೆ.

ಇನ್ನು ಜಿಲ್ಲೆಯಾದ್ಯಂತ ಒಟ್ಟು 1,122 ಮತಕೇಂದ್ರಗಳಲ್ಲಿ, 1,435 ಮತಯಂತ್ರಗಳನ್ನು ಇರಿಸಲಾಗಿದೆ. ಈ ಪೈಕಿ ಅದರಲ್ಲಿ 287 ಸೂಕ್ಷ್ಮ ಮತಗಟ್ಟೆಗಳಾಗಿವೆ 1435 ಮತಗಟ್ಟೆಗಳ ಪೈಕಿ 719 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಲೈವ್ ಮಾನಿಟರಿಂಗ್ ವ್ಯವಸ್ಥೆ ಅಳವಡಿಕೆ ಮಾಡಿದ್ದು, ಬೆಂಗಳೂರಿನ ಚುನಾವಣಾ ಕಚೇರಿಗೂ ಲೈವ್ ನೋಡುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ ನೀಡಿದರು.

ಇನ್ನು, ಮತದಾನದ ನಿಮಿತ್ತ 6,416 ಸಿಬ್ಬಂದಿ ನಿಯೋಜಿಸಲಾಗಿದ್ದು, ಚುನಾವಣಾ ಭದ್ರತೆಗೆ 1,352 ಮಂದಿ ಕರ್ನಾಟಕ ಪೊಲೀಸ್, ಸಿಎ‌ಪಿ‌ಎಫ್ 18 ತುಕಡಿ, 6 ಕೆಎಸ್​ಆರ್​ಪಿ ತುಕಡಿ ಹಾಗೂ 850 ಹೋಂ ಗಾರ್ಡ್ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದರು.

ಮತದಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕಲ ಸಿದ್ಧತೆ: ಮತ್ತೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧೆಡೆ ಮಸ್ಟರಿಂಗ್ ಕೇಂದ್ರಗಳಿದ್ದು ಅಲ್ಲಿಂದಲೇ ಸಿಬ್ಬಂದಿಗಳು ಮತಗಟ್ಟೆ ಕೇಂದ್ರಗಳಿಗೆ ತೆರಳಿದ್ದಾರೆ. ಮತಗಟ್ಟೆ ಸಿಬ್ಬಂದಿಗಳ ಜೊತೆಗೆ ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸರು ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ತೆರಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು 9628 ಮತಗಟ್ಟೆ ಸಿಬ್ಬಂದಿಗಳು ಕರ್ತವ್ಯದಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32 ಅತೀ ಸೂಕ್ಷ್ಮ ಮತಗಟ್ಟೆಗಳಿದ್ದು, ಒಟ್ಟು 1860 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 17,680,31 ಮತದಾರರಿದ್ದಾರೆ.

ಮಂಗಳೂರಿನ ರೊಸಾರಿಯೋ ಪ್ರೌಢಶಾಲೆಯಲ್ಲಿರುವ ಮಸ್ಟರಿಂಗ್ ಕೇಂದ್ರವನ್ನು ಪರಿಶೀಲನೆ ನಡೆಸಿದ ಮಂಗಳೂರು ನಗರ ಪೊಲೀಸ್ ಕಮಿಷನರ್​ ಕುಲದೀಪ್ ಕುಮಾರ್ ಜೈನ್ ನಗರದಲ್ಲಿ 1200 ಸಿಬ್ಬಂದಿಗಳು ಭದ್ರತೆಗೆ ನಿಯೋಜಿಸಲ್ಪಟ್ಟಿದ್ದಾರೆ. 10 ಸಿಎಪಿಎಫ್, 4 ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ನಗರದಲ್ಲಿ 7 ಮತಗಟ್ಟೆ ಸೂಕ್ಣ್ಮ ಮತಗಟ್ಟೆಗಳಿದ್ದು ಭದ್ರತೆ ಮಾಡಲಾಗಿದೆ ಎಂದರು.

ಇದನ್ನೂ ಓದಿ:ಮತದಾರರ ಸೆಳೆಯಲು ಸಖಿ, ಲಂಬಾಣಿ ಸಂಸ್ಕೃತಿ ಬಿಂಬಿಸುವ ಮತಗಟ್ಟೆ

Last Updated : May 9, 2023, 8:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.