ಕಾರವಾರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿ ಟಿವಿ, ಫ್ರಿಡ್ಜ್ ಸೇರಿದಂತೆ ಗೃಹಪಯೋಗಿ ವಸ್ತುಗಳು ಭಸ್ಮವಾಗಿರುವ ಘಟನೆ, ಅಂಕೋಲ ತಾಲೂಕಿನ ಹಾರವಾಡ ಸೀರ್ಬಡ್ ಕಾಲೋನಿಯಲ್ಲಿ ನಡೆದಿದೆ.
ಪಾಂಡುರಂಗ ಅಂಬಿಗ ಎಂಬವರ ಮನೆಯಲ್ಲಿ ತಡರಾತ್ರಿ ವಿದ್ಯುತ್ ಅಧಿಕ ಪ್ರಸರಣವಾದ ಹಿನ್ನೆಲೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ. ಈ ವೇಳೆ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಅಕ್ಕಿ, ಬಟ್ಟೆ ಸೇರಿದಂತೆ ಗೃಹಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.
ಸಿಲಿಂಡರ್ಗೆ ಕೂಡ ಬೆಂಕಿ ಹೊತ್ತಿತ್ತಾದರೂ ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಂಕೋಲ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹಾಜರಾಗಿ ಘಟನೆಯ ವಿವರಣೆ ಪಡೆದರು.