ಭಟ್ಕಳ : ಪರೀಕ್ಷೆಯಲ್ಲಿ ಫೇಲ್ ಆಗಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.
ಹರ್ಷಿತ ನಾಗರಾಜ ನಾಯ್ಕ(17) ಮೃತ ಬಾಲಕ. ಈತ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದು, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ತಾಯಿಯ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಸಂಬಂಧ ಯುವಕನ ಸಂಬಂಧಿಯೋರ್ವರು ಭಟ್ಕಳನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.