ಕಾರವಾರ : ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಸ್ ಇಂಜಿನ್ಗೆ ಬೆಂಕಿ ಹತ್ತಿಕೊಂಡಿರುವ ಘಟನೆ ಹೊನ್ನಾವರ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದ್ದು, ಚಾಲಕ ಮತ್ತು ನಿರ್ವಾಹಕರ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅವಘಡ ತಪ್ಪಿದೆ.
ಹೊನ್ನಾವರ ಪಟ್ಟಣದ ತಾತ್ಕಾಲಿಕ ಬಸ್ ನಿಲ್ದಾಣದ ಬಳಿ ನಿಂತಿದ್ದ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಬಸ್ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದ್ದಾರೆ. ಅಲ್ಲದೆ ಬೆಂಕಿ ಹತ್ತಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಹೆಚ್ಚಿನ ಅವಘಡ ನಡೆಯದಂತೆ ತಪ್ಪಿಸಿದ್ದಾರೆ.
ಓದಿ : ಗಾಂಜಾ ಮಾರಾಟಗಾರರ ಬಂಧನ: ಸಿಬ್ಬಂದಿ ಕಾರ್ಯಕ್ಕೆ ಪೊಲೀಸ್ ಆಯುಕ್ತರ ಮೆಚ್ಚುಗೆ
ಬಸ್‌ನ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದ್ದು, ಸಣ್ಣ ಪ್ರಮಾಣದಲ್ಲಿ ಡೀಸೆಲ್ ಕೂಡ ಸೋರಿಕೆಯಾಗುತ್ತಿತ್ತು. ಇದರಿಂದ ಬೆಂಕಿ ಇನ್ನಷ್ಟು ಜೋರಾಗಿ ಉರಿದಿದೆ. ಕೂಡಲೇ ಬಸ್‌ನ ಡೀಸೆಲ್ ಟ್ಯಾಂಕ್ ತೆರೆದು ಡೀಸೆಲ್ ಪೂರ್ತಿಯಾಗಿ ನೆಲಕ್ಕೆ ಹರಿಬಿಡಲಾಗಿದ್ದು. ದೊಡ್ಡ ದುರಂತ ತಪ್ಪಿದೆ.