ಶಿರಸಿ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಸಂಘದ ತಾಲೂಕು ಅಧ್ಯಕ್ಷ ಇಂದು ಮೃತಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಮುಂಡಗೋಡ ತಾಲೂಕು ಅಧ್ಯಕ್ಷ ಕೋವಿಡ್ ಕೇರ್ ಸೆಂಟರ್ನಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿಯೇ ರೈತ ಪ್ರಮುಖರ ಮೊದಲ ಸಾವು ಇದಾಗಿದೆ.
ಇವರು ಎರಡು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದರು. ಈ ಮೊದಲು ಇವರ ಪತ್ನಿಗೂ ಕೊರೊನಾ ಪಾಸಿಟಿವ್ ವರದಿಯಾಗಿತ್ತು. ಇದರ ಬೆನ್ನಲ್ಲೇ ಇವರ ಗಂಟಲು ದ್ರವ ಪರೀಕ್ಷೆ ನಡೆಸಿ ಕೋವಿಡ್ ವಾರ್ಡ್ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.