ETV Bharat / state

ಮಗಳು ಮೃತಪಟ್ಟ ಒಂದೇ ಗಂಟೆಯಲ್ಲಿ ತಂದೆ ಸಾವು... ಮುಗಿಲು ಮುಟ್ಟಿದ ಆಕ್ರಂದನ

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗಳು ಹಾಗೂ ಅನಾರೋಗ್ಯದ ಕಾರಣದಿಂದಾಗಿ ತಂದೆ ಕೂಡ ಸಾವನ್ನಪ್ಪಿದ್ದು, ಒಂದೇ ದಿನ ತಂದೆ-ಮಗಳು ನಿಧನರಾಗಿರುವ ಕಾರಣ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Father and Daughter death
Father and Daughter death
author img

By

Published : Jul 13, 2021, 1:40 AM IST

ಭಟ್ಕಳ: ತಾಲ್ಲೂಕಿನ ಮಾರುಕೇರಿಯಲ್ಲಿ ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿನಿ ಅನಾರೋಗ್ಯದಿಂದ ಮಂಗಳೂರಿನಲ್ಲಿ ಮೃತಪಟ್ಟಿದ್ದರೆ ಆಕೆಯ ತಂದೆ ಮನೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೇವಲ ಒಂದು ಗಂಟೆ ಅಂತರದಲ್ಲಿ ಈ ದುರ್ಘಟನೆ ನಡೆದಿದೆ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಾರುಕೇರಿ ಹೆಜ್ಜಿಲು ನಿವಾಸಿ ಕಾವ್ಯ ರಾಮ ಗೊಂಡ(15) ಹಾಗೂ ಆಕೆಯ ತಂದೆ ರಾಮ ಸುಕ್ರ ಗೊಂಡ (46)ಮೃತರು ಎಂದು ತಿಳಿದು ಬಂದಿದೆ. ತಾಲ್ಲೂಕಿನ ಕಿತ್ತೂರ ರಾಣಿ ಚೆನ್ನಮ್ಮಾ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಕಾವ್ಯ ಈ ವರ್ಷದ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಳು. ಕಳೆದ ಎರಡು ದಿನಗಳಿಂದ ಏಕಾಏಕಿ ಅನಾರೋಗ್ಯದಿಂದ ನರಳುತ್ತಿದ್ದು, ಸೋಮವಾರ ಬೆಳಿಗ್ಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಇತ್ತ ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಕೂಡ ಮಗಳು ಮೃತಪಟ್ಟ ಒಂದೇ ಗಂಟೆಯಲ್ಲಿ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿರಿ: ಮೇಕೆದಾಟು ಯೋಜನೆ ವಿವಾದ: ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಬಿಎಸ್​ವೈ ಮಹತ್ವದ ಚರ್ಚೆ

ಒಂದೇ ಕುಟುಂಬದ ಇಬ್ಬರು ಸದಸ್ಯರು ಒಂದು ಗಂಟೆಯ ಅಂತರದಲ್ಲಿ ಪ್ರಾಣ ಕಳೆದುಕೊಂಡಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟುವಂತೆ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.