ಕಾರವಾರ: ಪೀಠೋಪಕರಣ ತಯಾರಿಕಾ ಮಳಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಕೋಟ್ಯಂತರ ರೂ.ಮೌಲ್ಯದ ಪೀಠೋಪಕರಣಗಳು ಸುಟ್ಟು ಭಸ್ಮವಾಗಿವೆ. ದಾಂಡೇಲಿಯ ಅಂಬೇವಾಡಿಯಲ್ಲಿ ಇಂದು (ಶುಕ್ರವಾರ) ಮುಂಜಾನೆ ಈ ಘಟನೆ ನಡೆದಿದೆ.
ಅಂಬೇವಾಡಿಯ ಕೈಗಾರಿಕಾ ಪ್ರದೇಶದಲ್ಲಿರುವ ಈ ಮರದ ಪೀಠೋಪಕರಣ ತಯಾರಿಕಾ ಮಳಿಗೆ ದಾಂಡೇಲಿ ನಗರದ ಉದಯ ನಾಯ್ಕ ಎಂಬುವವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಇಡೀ ಮಳಿಗೆ ಸುಟ್ಟು ಕರಕಲಾಗಿದೆ. ಮಾತ್ರವಲ್ಲದೇ ಪಕ್ಕದ ಮಳಿಗೆಗಳಿಗೂ ಬೆಂಕಿ ಆವರಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ದಾಂಡೇಲಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಆಕಸ್ಮಿಕ ಅಗ್ನಿ ಅವಘಡ.. ಬೆಂಕಿಗಾಹುತಿಯಾದ 6 ವರ್ಷದ ಬಾಲಕ