ಕಾರವಾರ: ಮುಖ್ಯ ಕಡಲತೀರವನ್ನು ರಕ್ಷಣೆ ಮಾಡುವಂತೆ ಒತ್ತಾಯಿಸಿ ಮೀನುಗಾರರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ಮೂಲಕ ಪ್ರತಿಭಟನೆ ಮಾಡಿದರು.
ಸಾಗರಮಾಲಾ ಯೋಜನೆಯಡಿ ವಿಸ್ತರಣೆಗೊಳ್ಳುತ್ತಿರುವ ಎರಡನೇ ಹಂತದ ಬಂದರು ಅಭಿವೃದ್ಧಿ ಕಾಮಗಾರಿಯಿಂದ ನಗರದ ರವೀಂದ್ರನಾಥ ಠಾಗೂರ್ ಕಡಲತೀರಕ್ಕೆ ಹಾನಿಯಾಗುತ್ತಿದೆ ಹಾಗೂ ಮೀನುಗಾರಿಕೆಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ಕಡಲತೀರ ಉಳಿಸುವುದಕ್ಕಾಗಿ ಎರಡನೇ ಹಂತಹ ಬಂದರು ವಿಸ್ತರಣೆಯನ್ನು ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇರುವ ಒಂದು ಸುಂದರ ಕಡಲತೀರವನ್ನು ಕಳೆದುಕೊಳ್ಳುವುದರ ಜತೆಗೆ ಈ ಭಾಗದ ಮೀನಿಗಾರರು ಬೀದಿಗೆ ಬರಲಿದ್ದಾರೆ. ಈ ಕಾರಣದಿಂದ ಯಾವುದೇ ಕಾರಣಕ್ಕೂ ಯೋಜನೆ ಜಾರಿ ಮಾಡದಂತೆ ಆಗ್ರಹಿಸಿ, 700 ಕ್ಕೂ ಹೆಚ್ಚು ಪ್ರತಿಭಟನಾಕಾರರು ಶಾಂತಿಯುತ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕಡಲತೀರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಕೈಗೊಳ್ಳಲಾಗಿತ್ತು.