ಕಾರವಾರ : 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು 'ಆಜಾದಿ ಕಾ ಅಮೃತ್ ಮಹೋತ್ಸವ' ಎಂದು ಆಚರಿಸಲು ಕರೆ ನೀಡಲಾಗಿದೆ. ಅದರಂತೆ ಜಿಲ್ಲೆಯಲ್ಲಿನ ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು.
75ನೇ ವರ್ಷದ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು 'ಆಜಾದಿ ಕಾ ಅಮೃತ್ ಮಹೋತ್ಸವ' ಎಂದು ದೇಶದಾದ್ಯಂತ ಭಾರತೀಯ ನೌಕಾಪಡೆಯಿಂದ 75 ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲಾಗಿದೆ. ನವದೆಹಲಿಯ ಕೊಠಾರಿ ಕ್ರೀಡಾಂಗಣದಲ್ಲಿ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಅವರು ಈ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ನೀಡಿದರು.
ಕಾರವಾರದ ಕದಂಬ ನೌಕಾನೆಲೆ ವ್ಯಾಪ್ತಿಯ ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಮಹೇಶ್ ಸಿಂಗ್ ಅಂಜುದೀವ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಅಂಜುದೀವ್ ದ್ವೀಪವು ಭಾರತೀಯ ನೌಕಾಪಡೆಗೆ ರಕ್ಷಣೆಯ ದೃಷ್ಠಿಯಲ್ಲಿ ಪ್ರಮುಖವಾಗಿದೆ ಎಂದರು.