ಶಿರಸಿ: ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ದ್ವಿಚಕ್ರ ವಾಹನದ ಮೆಲೆ ಮರಬಿದ್ದು ಅರಣ್ಯ ರಕ್ಷಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಮಾವಿನಗುಂಡಿ ರಸ್ತೆಯ ಕುಳಿಬೀಡು ಬಳಿ ನಡೆದಿದೆ.
ಸಿದ್ದಾಪುರ ತಾಲೂಕಿನ ಹೊಸೂರು ಗ್ರಾಮದ ಅರಣ್ಯ ರಕ್ಷಕ ಶಶಿಧರ್ (58) ಮೃತರು. ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ಚಾಹನದಲ್ಲಿ ಸಾಗುತ್ತಿರುವ ವೇಳೆ ದಿಢೀರ್ನೆ ಭಾರಿ ಗಾತ್ರದ ಮರ ಬಿದ್ದಿದೆ. ಈ ವೇಳೆ ಮರದಡಿಗೆ ಸಿಲುಕಿ ಶಶಿಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಿದ್ದಾಪುರ ಅರಣ್ಯ ಇಲಾಖೆಯ ಸಿಬ್ಬಂದಿ ಮರದ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.