ETV Bharat / state

ಶಿರಸಿ ಪ್ರತ್ಯೇಕ ಜಿಲ್ಲೆ ರಚನೆ: ಕಾಗೇರಿಯಿಂದ ಸಕಾರಾತ್ಮಕ ಸ್ಪಂದನೆ - Positive response from Kageri

ಕಾರ್ಮಿಕ ಇಲಾಖೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿರಸಿ ಪ್ರತ್ಯೇಕ ಜಿಲ್ಲೆ ರಚನೆ ಕುರಿತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಕಾಗೇರಿಯಿಂದ ಸಕಾರಾತ್ಮಕ ಸ್ಪಂದನೆ
ಕಾಗೇರಿಯಿಂದ ಸಕಾರಾತ್ಮಕ ಸ್ಪಂದನೆ
author img

By

Published : Dec 6, 2022, 7:51 PM IST

ಶಿರಸಿ:ಇದೇ ಮೊದಲ ಬಾರಿಗೆ ಸಾರ್ವಜನಿಕ ವೇದಿಕೆಯಲ್ಲಿ ಶಿರಸಿ ಪ್ರತ್ಯೇಕ ಜಿಲ್ಲೆ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದ್ದಾರೆ. ಜಿಲ್ಲೆಯ ರಚನೆಯ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶಿರಸಿಯಲ್ಲಿ ಮಂಗಳವಾರ ನಡೆದ ಕಾರ್ಮಿಕ ಇಲಾಖೆ ರಾಜ್ಯ ವಿಮಾ ಯೋಜನೆ ಚಿಕಿತ್ಸಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ರಾಜ್ಯದ ವಿವಿಧ ಜಿಲ್ಲೆ ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆಯಾಗಿದೆ.

ಘಟ್ಟದ ಮೇಲಿನ ತಾಲೂಕುಗಳನ್ನು ಒಳಗೊಂಡ ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆಗೆ ಬಲ ಬರುತ್ತಿದೆ. ಈ ಬಗ್ಗೆ ಸಾರ್ವಜನಿಕರು ನನ್ನ ಹಾಗೂ ಸಚಿವ ಶಿವರಾಮ ಹೆಬ್ಬಾರ ಅವರನ್ನು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಗೆ ಕಾಗೇರಿಯಿಂದ ಸಕಾರಾತ್ಮಕ ಸ್ಪಂದನೆ

ಪ್ರತ್ಯೇಕ ಜಿಲ್ಲೆ ಬೇಡಿಕೆ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಬಳಿ ಚರ್ಚಿಸಲಾಗಿದೆ. ಪ್ರತ್ಯೇಕ ಜಿಲ್ಲೆಯಾಗಲು ಸಚಿವ ಹೆಬ್ಬಾರ ಅವರ ಸಹಕಾರವೂ ಮುಖ್ಯ. ಈ ಬಗ್ಗೆ ಮತ್ತೊಮ್ಮೆ ಮುಖ್ಯಮಂತ್ರಿ ಅವರಲ್ಲಿ ಇಬ್ಬರೂ ಚರ್ಚಿಸುತ್ತೇವೆ. ಸಮಯ, ಸಂದರ್ಭ ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಇದೇ ವೇಳೆ ಭರವಸೆಯನ್ನೂ ನೀಡಿದರು.

ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು, ಅಲ್ಲದೇ ಕಡ್ಡಾಯಗೊಳಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.