ಕಾರವಾರ: ಮಾಜಿ ಸಚಿವ ಆರ್.ವಿ.ದೇಶಪಾಂಡೆಗೆ ಕೊರೊನಾ ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಹಳಿಯಾಳ ಕ್ಷೇತ್ರದ ಶಾಸಕರಾಗಿರುವ ಆರ್.ವಿ.ದೇಶಪಾಂಡೆ ಈ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ಕಳೆದ 15 ದಿನದಿಂದ ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ದೇಶಪಾಂಡೆ ಮನವಿ ಮಾಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ಎರಡನೇ ಬಾರಿ ಕೋವಿಡ್ ಲಸಿಕೆ ಪಡೆದುಕೊಳ್ಳುತ್ತಿರುವುದಾಗಿ ಮಾಹಿತಿ ಹಂಚಿಕೊಂಡಿದ್ದರು.