ಶಿರಸಿ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದ ಆರೋಪಿಯನ್ನು ಪೋಸ್ಕೊ ಪ್ರಕರಣದಡಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಶಿರಸಿ ತಾಲೂಕಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಗೋಣಬೀಡು ಹೋಬಳಿಯ ತಾಟೆಬೈಲಿನ ಸುರೇಂದ್ರ ರಾಜು ಮೊಗೇರ ಬಂಧಿತ ಆರೋಪಿಯಾದ್ದು, ಅಪ್ರಾಪ್ತೆಯ ಕುಟುಂಬದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.