ETV Bharat / state

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಕೊಲೆಗಡುಕನಿಂದ ಪಾರಾದ ಇಬ್ಬರು ಮಕ್ಕಳು - ಭೀಕರ ಹತ್ಯೆ

ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಲಾಗಿದೆ.

murder in uttarakannada
ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ
author img

By

Published : Feb 24, 2023, 6:27 PM IST

Updated : Feb 25, 2023, 10:40 AM IST

ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ

ಭಟ್ಕಳ(ಉತ್ತರಕನ್ನಡ): ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಮನೆಯೊಳಗೆ ಮಲಗಿದ್ದ ಮಗು ಹಾಗೂ ಪಕ್ಕದ ಮನೆಯಲ್ಲಿದ್ದ ಇನ್ನೊಂದು ಮಗು ಕೊಲೆಗಡುಕರಿಂದ ಪಾರಾಗಿವೆ.

ಶಂಭು ಹೆಗಡೆ (65), ಅವರ ಪತ್ನಿ ಮಾದೇವಿ ಹೆಗಡೆ (45), ಅವರ ಮಗ ರಾಜೀವ್ ಹೆಗಡೆ (34) ಹಾಗೂ ಸೊಸೆ ಕುಸುಮಾ ಭಟ್(30) ಕೊಲೆಯಾದವರಾಗಿದ್ದಾರೆ. ಕುಟುಂಬದ ಸಂಬಂಧಿ ವಿನಯ ಶ್ರೀಧರ ಭಟ್ ಕತ್ತಿಯಿಂದ ಹಲ್ಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಡವಳ್ಳಿಯ ಓಣಿಬಾಗಿಲು ಗ್ರಾಮದಲ್ಲಿ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಕಳೆದ ಏಳು ತಿಂಗಳ ಹಿಂದೆ ಶಂಭು ಭಟ್ ಅವರ ಹಿರಿಯ ಮಗ ಶ್ರೀಧರ ಭಟ್ ಕ್ಯಾನ್ಸರ್ ಕಾಯಿಲೆಯಿಂದ ಮೃತಪಟ್ಟಿದ್ದರು. ಶ್ರೀಧರ ಭಟ್ ಸಾವಿನ ನಂತರ ಅವರ ಪತ್ನಿ ವಿದ್ಯಾ ಭಟ್ ಕುಟುಂಬದ ಆಸ್ತಿಯಲ್ಲಿ ಪಾಲು ಕೇಳಿ ಜಗಳ ಮಾಡಿಕೊಂಡಿದ್ದರು. ಮಾತುಕತೆ ನಂತರ ಶಂಭು ಭಟ್ಟರು ಸೊಸೆ ವಿದ್ಯಾಳಿಗೆ ಆಸ್ತಿಯಲ್ಲಿ ಪಾಲು ನೀಡಿದ್ದರು. ಆದರೆ ಇದೇ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ವಿದ್ಯಾ ಸಹೋದರ ಹಲ್ಯಾಣಿ ನಿವಾಸಿ ವಿನಯ ಶ್ರೀಧರ ಭಟ್ ಈ ಕೃತ್ಯ ಎಸಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕೊಲೆ ಸಂಬಂಧ ವಿದ್ಯಾ ಭಟ್ ಹಾಗೂ ಅವರ ತಂದೆ ಶ್ರೀಧರ ಭಟ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿಯಾಗಿರುವ ವಿದ್ಯಾಳ ಸಹೋದರ ವಿನಯ ಭಟ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮನೆಯ ಆವರಣದಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಭೀಕರ ದೃಶ್ಯ ಕಂಡುಬಂತು. ಘಟನೆ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ನಡೆದಿದೆ.

ಇದನ್ನೂ ಓದಿ: ಪ್ರತ್ಯೇಕ ಪ್ರಕರಣ: ಹಣಕ್ಕಾಗಿ ತಂದೆ ಕೊಲೆ ಮಾಡಿದ ಮಗ.. ಹೊಲಕ್ಕೆ ತಂದೆ ಭೇಟಿಗೆ ಹೋದ ಪುತ್ರ

Last Updated : Feb 25, 2023, 10:40 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.