ETV Bharat / state

ಗ್ಯಾಸ್ ಟ್ಯಾಂಕರ್ ಪಲ್ಟಿ: ಇಬ್ಬರ ಸ್ಥಿತಿ ಗಂಭೀರ - Gas tanker accident in Bhatkal

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Gas tanker accident in Bhatkal
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ
author img

By

Published : Dec 23, 2020, 7:04 PM IST

ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ಭಟ್ಕಳ ತಾಲೂಕಿನ ಪುರವರ್ಗ ಗಣೇಶ ನಗರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬುಧವಾರ ಸಂಜೆ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಹಿಂದೂಸ್ಥಾನ್​​ ಪೆಟ್ರೋಲಿಯಂ ಟ್ಯಾಂಕರ್ ಚಾಲಕ ತನ್ನ‌ ಎದುರಿಗೆ ಶಿರೂರಿನಿಂದ ಮಂಕಿ ಕಡೆಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋದ ಸಂದರ್ಭ ಗ್ಯಾಸ್ ಟ್ಯಾಂಕರ್​​ ಪಲ್ಟಿಯಾಗಿದೆ.

ಅಪಘಾತದಲ್ಲಿ ಟ್ಯಾಂಕರ್​ ಚಾಲಕ ಮಂಜುನಾಥ (50) ತಲೆಗೆ ಬಲವಾದ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇತ್ತ ಬೈಕ್​ನಲ್ಲಿದ್ದ ಇಬ್ಬರು ಸವಾರರು ಬೈಕ್​​ ಸಮೇತ ಟ್ಯಾಂಕರ್​ ಎದುರಿಗೆ ಪಲ್ಟಿಯಾಗಿ ಬಿದ್ದಿದ್ದಾರೆ. ಬೈಕ್​ ಸವಾರ ಸಮ್ಮುನ್ ಇಮ್ತಿಯಾಜ್ ಬೈಲೂರಕರ್ (32) ಗಾಯಗೊಂಡಿದ್ದು, ತಾಯಿ ಖಾತುನ್ ಇಮ್ತಿಯಾಜ್ ಬೈಲೂರಕರ್ (58) ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆ್ಯಂಬ್ಯುಲೆನ್ಸ್​​ ಮೂಲಕ ಸಾಗಿಸಲಾಗಿದೆ‌.

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ, ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.