ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎದುರು ಬಂದ ಆಕಳನ್ನು ತಪ್ಪಿಸಲು ಹೋಗಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ.
ಈ ಘಟನೆ ಹೊನ್ನಾವರ ತಾಲೂಕಿನ ಮಂಕಿ ಅನಂತವಾಡಿ ಬಳಿ ಇಂದು ಸಂಜೆ ನಡೆದಿದೆ. ಪುಣೆಯಿಂದ ಮಂಗಳೂರಿಗೆ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.
ಅದೃಷ್ಟವಸಾತ್ ಟ್ಯಾಂಕರ್ ಖಾಲಿ ಇದ್ದ ಪರಿಣಾಮ ಸಂಭವಿಸಬಹುದಾದ ಅವಘಡ ತಪ್ಪಿದಂತಾಗಿದೆ. ಆದರೆ ಘಟನೆಯಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಬಳಿಕ ಅಗ್ನಿಶಾಮಕ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಬಳಿಕ ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಭಯಭೀತರಾಗಿದ್ದಾರೆ. ಆದರೆ ಪಲ್ಟಿಯಾಗಿರುವ ಟ್ಯಾಂಕರ್ ಇರುವ ಬಗ್ಗೆ ತಿಳಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ.