ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಯುವಕನೊಬ್ಬ ಅಕ್ರಮವಾಗಿ ಮಾಸ್ಕ್ ನಲ್ಲಿ ಚಿನ್ನ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿರುವ ಘಟನೆ ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಯುಎಇ ಇಂದ ಕರಿಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವ್ಯಕ್ತಿ ಅರಬ್ ರಾಷ್ಟ್ರದಿಂದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಈತ ತನ್ನ ಮಾಸ್ಕ್ನೊಳಗೆ ಸುಮಾರು 2 ಲಕ್ಷ ಮೌಲ್ಯದ 40 ಗ್ರಾಂ ಚಿನ್ನವನ್ನು ಅಕ್ರಮವಾಗಿ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದ ಎನ್ನಲಾಗ್ತಿದೆ.
ಇದನ್ನು ಗಮನಿಸಿದ ಕೋಜಿಕೋಡನ ಇಂಟಲಿಜೆನ್ಸ್, ಕ್ಯಾಲಿಕಟ್ ಯುನಿಟ್, ಕೊಚ್ಚಿನ್ ಕಸ್ಟಮ್ಸ್ ಪ್ರಿವೆಂಟಿವ್ ಅಧಿಕಾರಿಗಳು ಆತನನ್ನು ತಪಾಸಣೆ ನಡೆಸಿ ಬಂಧಿಸಿದ್ದಾರೆ.