ಕಾರವಾರ (ಉತ್ತರ ಕನ್ನಡ) : ಜೋಯಿಡಾದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಚುನಾವಣಾ ಪ್ರಚಾರ ಸಭೆಗೆ ಆಗಮಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೆಲಿಕಾಪ್ಟರ್ ಸಂಪರ್ಕ ಕೊರತೆಯಿಂದಾಗಿ ಇಳಿಯಲು ಸಾಧ್ಯವಾಗದೆ ರಾಮನಗರಕ್ಕೆ ತೆರಳಿದ ಘಟನೆ ಇಂದು ನಡೆಯಿತು. ಹಳಿಯಾಳ ಜೊಯಿಡಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಘೋಟ್ನೇಕರ್ ಪರ ಪ್ರಚಾರಕ್ಕೆ ಸವದತ್ತಿಯಿಂದ ಜೊಯಿಡಾಕ್ಕೆ ಆಗಮಿಸಿದ್ದ ವೇಳೆ ಸಂಪರ್ಕ ಕೊರತೆಯಿಂದ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ 20 ನಿಮಿಷ ಆಗಸದಲ್ಲಿಯೇ ಹಾರಾಟ ನಡೆಸಿತ್ತು.
ಹೆಲಿಪಾಡ್ನತ್ತ ಬಂದಾಗ ಸಿಗ್ನಲ್ ನೀಡದೆ ಗಂಧಕದ ಹೊಗೆ ಕೂಡ ಹಾಕದೇ ಇರುವುದರಿಂದ ಯಾವುದೇ ರೀತಿಯ ಸೂಚನೆ ಸಿಗದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಆಗಸದಲ್ಲಿಯೇ ಸುತ್ತಾಟ ನಡೆಸಿತು.
ಕೊನೆಗೆ ವೈರ್ಲೆಸ್ ಮೂಲಕ ಸಂದೇಶ ನೀಡಿ ಸಿಗ್ನಲ್ ಕಳುಹಿಸಿದ ಬಳಿಕ ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಿದರು. ಜೋಯಿಡಾದ ಬಿಜಿಎಸ್ ಕಾಲೇಜು ಮೈದಾನದಲ್ಲಿ ಎಸ್.ಎಲ್.ಘೋಟ್ನೇಕರ್ ಪರ ಮತಯಾಚನೆ ನಡೆಸಲಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ ನೀಡಿ ಜೋಯಿಡಾ ಜೆಡಿಎಸ್ ಕಾರ್ಯಕರ್ತರು ಬರಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹೆಚ್.ಡಿ.ಕುಮಾರಸ್ವಾಮಿ, ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆಯಿಂದ ಜೋಯಿಡಾಕ್ಕೆ ಬರಲು ತಡವಾಗಿದೆ. ಇಲ್ಲಿ ಸಿಗ್ನಲ್ ಸಿಕ್ಕಿರದ ಕಾರಣ 20 ನಿಮಿಷ ಆಕಾಶದಲ್ಲಿಯೇ ಸುತ್ತಾಡುತ್ತಾ ರಾಮನಗರದ ಕಡೆ ತೆರಳಬೇಕಾಯಿತು. ಬೇರೆ ಏನೂ ಸಮಸ್ಯೆ ಆಗಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ : ಈ ಬಾರಿ ಜೆಡಿಎಸ್ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ: ಹೆಚ್‌ಡಿಕೆ ವಿಶ್ವಾಸ
ಹಾಸನದಲ್ಲಿ ರೇವಣ್ಣನವರ ಟಿಕೆಟ್ ಅಸಮಾಧಾನ ಕುರಿತು ಮಾತನಾಡಿ, ನಮ್ಮ ಕುಟುಂಬದ ಅಸಮಾಧಾನ ಸರಿಹೋಗಿದೆ. ಯಾವುದೇ ಸಮಸ್ಯೆ ಇಲ್ಲ. ಎಲ್ಲವೂ ಸರಿಹೋಗುತ್ತಿದೆ ಎಂದರು.
ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಬಾರಿ ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಜೆಡಿಎಸ್ ಸರ್ಕಾರ ರಚನೆಯಾಗುವುದು ಖಚಿತ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯದ 123 ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎಂಬ ಉದ್ದೇಶ, ಗುರಿ ಇಟ್ಟುಕೊಂಡು ಜೆಡಿಎಸ್ ಕಾರ್ಯತಂತ್ರ ಮಾಡುತ್ತಿದೆ. ಬಿಜೆಪಿ ಅಥವಾ ಕಾಂಗ್ರೆಸ್ಗೆ ಬಹುಮತ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಜೆಡಿಎಸ್ ಮಾತ್ರ ಪರ್ಯಾಯ ರಾಜಕೀಯವಾಗಿ ಬೆಳೆಯುತ್ತಿದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಬರುವುದಿಲ್ಲ, ಬದಲಿಗೆ ಜೆಡಿಎಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇದನ್ನೂ ಓದಿ : ಮೋದಿ ಅವರ ಆಪ್ತ ಬಳಗದಲ್ಲಿರುವ ಅಂಬಾನಿಯ ಕಣ್ಣು ದೇಶದ ಹಾಲಿನ ಮೇಲೆ ಬಿದ್ದಿದೆ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ