ETV Bharat / state

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! - ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ

ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗದ ದಶಕಗಳ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಹಾಲಕ್ಕಿ ಒಕ್ಕಲಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ 20 ವರ್ಷದಿಂದಲೂ ಬೇಡಿಕೆ ಇರಿಸಿದ್ದು, ಇಂದಿಗೂ ಈಡೇರಲ್ಲ. ಹೀಗಾಗಿ ಮುಂಬರುವ ದಿನದಲ್ಲಿ ತೀವ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

halakki-vokkaliga-community-demanded-to-inclusion-in-scheduled-tribe
ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ
author img

By

Published : Oct 1, 2021, 7:59 AM IST

ಕಾರವಾರ (ಉ.ಕ): ಉತ್ತರ ಕನ್ನಡ ಜಿಲ್ಲೆಯ ಕಾಡುಗಳಲ್ಲಿ ಇಂದಿಗೂ ಹಲವಾರು ಬುಡಕಟ್ಟು ಸಮುದಾಯಗಳು ಜೀವನ ಕಟ್ಟಿಕೊಂಡಿವೆ. ಅದರಲ್ಲೂ ಜಿಲ್ಲೆಯ ಕರಾವಳಿಯಲ್ಲಿ ಕಂಡುಬರುವ ಬುಡಕಟ್ಟು ಸಮುದಾಯದ ಹಾಲಕ್ಕಿ ಒಕ್ಕಲಿಗರು ಕಳೆದ ಹಲವು ವರ್ಷಗಳಿಂದ ತಮ್ಮನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಅಷ್ಟಾದರೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆ ಜಾನಪದ ಕೋಗಿಲೆ ಖ್ಯಾತಿಯ ಸುಕ್ರಿ ಬೊಮ್ಮುಗೌಡ ಇದೀಗ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನೇ ಪಣಕ್ಕಿಟ್ಟು ಹೋರಾಟಕ್ಕಿಳಿದಿದ್ದಾರೆ.

ಹಾಲಕ್ಕಿ ಒಕ್ಕಲಿಗರು ಉತ್ತರಕನ್ನಡ ಜಿಲ್ಲೆಯಲ್ಲಿ ಕಂಡು ಬರುವ ವಿಶಿಷ್ಟ ಬುಡಕಟ್ಟು ಜನಾಂಗ. ಜಿಲ್ಲೆಯ ಕರಾವಳಿ ತಾಲೂಕುಗಳಾದ ಅಂಕೋಲಾ, ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಮಾತ್ರ ಹಾಲಕ್ಕಿ ಬುಡಕಟ್ಟು ಜನಾಂಗದವರು ಕಂಡು ಬರುತ್ತಾರೆ. ಈ ಸಮುದಾಯ ಸರ್ಕಾರದ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದು, ಹೋರಾಟದ ಹಾದಿಗಿಳಿದಿವೆ.

ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ

ಈ ಸಮುದಾಯಕ್ಕೆ ಸೇರಿದ ಜಾನಪದ ಕೋಗಿಲೆ ಖ್ಯಾತಿಯ ನಾಡೋಜ, ಪದ್ಮಶ್ರೀ ಸುಕ್ರಿ ಬೊಮ್ಮುಗೌಡ ಇದೀಗ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಸುಮಾರು 1.5 ಲಕ್ಷ ಜನಸಂಖ್ಯೆ ಇರುವ ಹಾಲಕ್ಕಿ ಒಕ್ಕಲಿಗ ಜನಾಂಗವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಜನಾಂಗದವರ ಬಹುದೊಡ್ಡ ಬೇಡಿಕೆ. ಈ ನಿಟ್ಟಿನಲ್ಲಿ ಕಳೆದ 2000ನೇ ಇಸ್ವಿಯಿಂದಲೂ ಹೋರಾಟ ನಡೆಸುತ್ತಲೇ ಬಂದಿದ್ದು ಇಂದಿಗೂ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಮಾತ್ರ ಸೇರಿಸಿಲ್ಲ.

ಪದ್ಮಶ್ರೀ ಪ್ರಶಸ್ತಿ ವಾಪಸ್

ಈ ನಿಟ್ಟಿನಲ್ಲಿ ತಮ್ಮ ಸಮುದಾಯದ ಒಳಿತಿಗಾಗಿ ಮುಂದಾಗಿರುವ ಸುಕ್ರಿ ಬೊಮ್ಮುಗೌಡ ತಮ್ಮ ಜನಾಂಗವನ್ನ ಪರಿಶಿಷ್ಠ ಪಂಗಡಕ್ಕೆ ಸೇರಿಸುವಂತೆ ಸರ್ಕಾರವನ್ನ ಒತ್ತಾಯಿಸಿದ್ದಾರೆ. ಸರ್ಕಾರದ ಸೌಲಭ್ಯದಿಂದ ಜನಾಂಗ ವಂಚಿತವಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ಒಂದಿಷ್ಟು ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸುಕ್ರಜ್ಜಿ ತಮ್ಮ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಸ್ ಮಾಡುವುದಾಗಿ ಎಚ್ಚರಿಸಿದ್ದಾರೆ.

ಈ ಸಮುದಾಯವನ್ನ ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ 20 ವರ್ಷದಿಂದಲೂ ಕೇಂದ್ರ ಈ ಬಗ್ಗೆ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಜನಾಂಗಕ್ಕೆ ನ್ಯಾಯ ಸಿಗದೇ ಹೋದರೆ ವಿಧಾನಸೌಧದ ಎದುರಲ್ಲೇ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.