ದಕ್ಷಿಣಕನ್ನಡ/ಉತ್ತರಕನ್ನಡ/ಕಲಬುರಗಿ : ವರುಣನ ಆರ್ಭಟ ಹೆಚ್ಚಾಗಿದ್ದು, ಮಳೆಯಿಂದ ಜನರು ತತ್ತರಿಸಿದ್ದಾರೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು ಕೂಡ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ (ಕೆಲ ತಾಲೂಕು) ದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿಯೂ ಕೂಡ ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಲವೆಡೆ ಮನೆಗಳು ಜಲಾವೃತವಾಗಿವೆ. ಉತ್ತರಕನ್ನಡದ ಕಾರವಾರ, ಕುಮಟಾ ಹಾಗೂ ಹೊನ್ನಾವರ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಶ್ರಯ ಒದಗಿಸಲಾಗಿದೆ. ಬೆಳಗಾವಿ, ಬೀದರ್ನಲ್ಲಿ ಇನ್ನೆರಡು ದಿನ ಹಳದಿ ಯೆಲ್ಲೋ ಅಲರ್ಟ್ ಇರಲಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಭೂಕಂಪನ: ಬೆಚ್ಚಿಬಿದ್ದ ಜನ