ಕಾರವಾರ : ಹವಾಮಾನ ಇಲಾಖೆಯು ಇಂದಿನಿಂದ ಜುಲೈ 15ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸೂಚನೆ ನೀಡಿದೆ. ಸಾರ್ವಜನಿಕರು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಅಗತ್ಯ ಮುಂಜಾಗೃತೆ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಹವಾಮಾನ ಇಲಾಖೆ ಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ಇದೇ ಕಾರಣಕ್ಕೆ ಜಿಲ್ಲೆಯಾದ್ಯಂತ ಅಧಿಕಾರಿಗಳು ಅಗತ್ಯ ಮುಂಜಾಗೃತಾ ಕ್ರಮಕೈಗೊಳ್ಳಬೇಕು. ಜನರು ಕೂಡ ಮಳೆ-ಗಾಳಿ ಬೀಸುವ ಸಂದರ್ಭದಲ್ಲಿ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಬಳಿ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಸಾರ್ವಜನಿಕರು ಆಶ್ರಯ ಪಡೆಯಬೇಕು.
ಪ್ರಕೃತಿ ವಿಕೋಪಕ್ಕೆ ಸಂಬಂಧಿತ ಯಾವುದೇ ತುರ್ತು ಸೇವೆಗೆಗಾಗಿ 1077 ಹಾಗೂ ವ್ಯಾಟ್ಸ್‌ಆ್ಯಪ್ ನಂ 9483511015ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ: ಕೆಆರ್ಎಸ್ ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ, ಕ್ರಮ ಕೈಗೊಳ್ಳಬೇಕು : ಎಂಬಿಪಾ