ETV Bharat / state

ಉ.ಕ ಜಿಲ್ಲೆಯಲ್ಲಿ ಬಿರುಗಾಳಿಗೆ ಹಾರಿದ ಮನೆಗಳ ಚಾವಣಿ, ವಿದ್ಯುತ್ ಕಂಬ ಧರೆಗೆ - ಉತ್ತರ ಕನ್ನಡ ಮಳೆ ನ್ಯೂಸ್​

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾತ್ರಿ ಸುರಿದ ಗಾಳಿಸಹಿತ ಭಾರಿ‌ ಮಳೆಗೆ ಮುಂಡಗೋಡು, ಕುಮಟಾ ಭಾಗದಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮನೆಗಳ ಚಾವಣಿ ಹಾರಿ ಹೋಗಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ
author img

By

Published : May 18, 2022, 11:56 AM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ‌ ಎರಡು ದಿನದಿಂದ ಭಾರಿ ಮಳೆಯಾಗುತ್ತಿದೆ. ರಾತ್ರಿ ಸುರಿದ ಗಾಳಿ ಸಹಿತ ಜೋರು ಮಳೆಗೆ ಮುಂಡಗೋಡು, ಕುಮಟಾ ಭಾಗದಲ್ಲಿ ಮರ, ವಿದ್ಯುತ್ ಕಂಬಗಳು ಧರೆಗುರುಳಿವೆ. ಮನೆಗಳ ಚಾವಣಿ ಹಾರಿ ಹೋಗಿದ್ದು ಭಾರಿ ನಷ್ಟ ಉಂಟಾಗಿದೆ.

ಮುಂಡಗೋಡು ತಾಲೂಕಿನ ತೆಂಗಿನಕೊಪ್ಪ ಗ್ರಾಮದಲ್ಲಿ ಎರಡು ಮನೆಯ ಚಾವಣಿ ಹಾರಿ ಹೋಗಿದೆ. ಚವಡಳ್ಳಿಯಲ್ಲಿ ನಾಲ್ಕು ಮನೆಗಳ ಮೇಲೆ ಮರ ಬಿದ್ದಿದೆ. ಭಾರಿ ಮಳೆಗೆ ಇಲ್ಲಿನ ಅಂಧ‌ ಮಕ್ಕಳ ವಸತಿ ನಿಲಯದ ಚಾವಣಿ, ಗೋಡೆ, ಬ್ಯಾಂಕಿನ ಗೋಡೆ ಕುಸಿದು ಬಿದ್ದಿದೆ. ಕುಮಟಾದಲ್ಲಿಯೂ 3 ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಸುಮಾರು 12 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಮುಂಡಗೋಡಿನಲ್ಲಿ ವಿದ್ಯುತ್ ಕಂಬ, ಮನೆಗಳು ಸೇರಿ 11 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಜಿಲ್ಲೆಯಲ್ಲಿ ಇಂದು ಕೂಡ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ಸಮುದ್ರ ದಡಕ್ಕೆ ಪ್ರವಾಸಿಗರು, ಸಾರ್ವಜನಿಕರು ಹೋಗದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಕರಾವಳಿ ಪ್ರದೇಶದಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ವರುಣಾರ್ಭಟಕ್ಕೆ ಇಬ್ಬರು ಕಾರ್ಮಿಕರು ಬಲಿ; 200ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.