ETV Bharat / state

ಉತ್ತರಕನ್ನಡದ ಕರಾವಳಿಯಲ್ಲಿ ದಿಢೀರ್ ಭಾರಿ ಮಳೆ

ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.

Karwar
Karwar
author img

By

Published : Oct 14, 2020, 7:49 PM IST

ಕಾರವಾರ: ಕಳೆದ ಕೆಲ ದಿನಗಳಿಂದ‌‌ ಬಿರು ಬಿಸಿಲಿನಿಂದ ಕೂಡಿದ್ದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳತೊಡಗಿದೆ.

ಬೆಳಗ್ಗೆಯಿಂದಲೂ ಬಿಸಿಲಿನಿಂದ ಕೂಡಿದ್ದ ಕರಾವಳಿಯಲ್ಲಿ ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ನಗರದ ಹೈ ಚರ್ಚ್, ಹಬ್ಬುವಾಡ, ರಾಷ್ಟ್ರೀಯ ಹೆದ್ದಾರಿ 66 ರ ಅರಗಾ ಬಳಿ ರಸ್ತೆಗಳಲ್ಲಿ ನೀರು ತುಂಬಿಕೊಂಡ ಪರಿಣಾಮ ಸಂಚಾರಕ್ಕೆ ಅಡ್ಡಿಯಾಗಿದೆ. ಉಳಿದಂತೆ ಕರಾವಳಿಯ ಬಹುತೇಕ ಎಲ್ಲಾ ತಾಲೂಕುಗಳಲ್ಲಿಯೂ ಭಾರಿ ಮಳೆಯಾಗಿದೆ.

ಇದರ ಜೊತೆಗೆ ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರದಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ‌ ಮಳೆಯಾಗಲಿ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ‌ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಭಾರೀ ಮಳೆಯಾಗಲಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯು ಪ್ರತಿ ಗಂಟೆಗೆ 45- 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.