ಶಿರಸಿ : ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೂ ಧೂಳಿ (58) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.
ಉತ್ತರ ಕನ್ನಡದ ಹಳಿಯಾಳ ನಿವಾಸಿಯಾಗಿರೋ ರಾಜು ಧೂಳಿ ಭಾರತೀಯ ಜನತಾ ಪಕ್ಷದಲ್ಲಿಯೂ ಸಹ ಗುರುತಿಸಿಕೊಂಡಿದ್ದರು. ಕೊರೊನಾ ಚಿಕಿತ್ಸೆಯಲ್ಲಿದ್ದ ರಾಜೂ ಧೂಳಿ, ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಹುಬ್ಬಳ್ಳಿಯ ಸುಶ್ರುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾದೇ ಶನಿವಾರ ನಿಧನರಾದರು.
ರಾಜು ಧೂಳಿ ನಿಧನಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರು ಸಂತಾಪ ಸೂಚಿಸಿದ್ದಾರೆ.