ETV Bharat / state

ಶಂಭುಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಸಂಘಟನೆಗಳ ಆಗ್ರಹ

ಹೊನ್ನಾವರ ತಾಲೂಕಿನ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಒತ್ತಾಯಿಸಿದ್ದಾರೆ.

hindu-organizations-demand-dress-code-in-shambulingeshwar-temple
ಶಂಭುಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಸಂಘಟನೆಗಳ ಆಗ್ರಹ
author img

By

Published : Dec 21, 2022, 10:39 PM IST

ಕಾರವಾರ : ಹೊನ್ನಾವರ ತಾಲೂಕಿನ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ಸದಸ್ಯರು ಶಂಭುಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ.

ಶಂಭುಲಿಂಗೇಶ್ವರ ದೇವಸ್ಥಾನವು ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದು. ದೇವಸ್ಥಾನವು ಒಂದು ಕಾರಣಿಕ ಸ್ಥಳವಾಗಿದ್ದು, ಅತ್ಯಂತ ಪವಿತ್ರ ಹಾಗೂ ಸಮಾಜಕ್ಕೆ ಚೈತನ್ಯವನ್ನು ನೀಡುವ ಪುಣ್ಯಕ್ಷೇತ್ರವಾಗಿದೆ. ಶಂಭುಲಿಂಗೇಶ್ವರ ಅಸ್ತಿತ್ವದಿಂದ ಗುಣವಂತೆ ನಗರ ಪಾವನವಾಗಿದೆ. ಇಂತಹ ದೇವಸ್ಥಾನದ ಪಾವಿತ್ರ‍್ಯವನ್ನು ಜೋಪಾಸನೆ ಮಾಡಿದರೆ ಮಾತ್ರ ಅಲ್ಲಿರುವ ದೈವತ್ವದ ಅನುಭವವನ್ನು ಪಡೆಯಬಹುದು ಎಂದು ಮನವಿಯಲ್ಲಿ ಮಾಡಿದ್ದಾರೆ.

ಹಿಂದೂ ಸಂಸ್ಕೃತಿಯ ಪ್ರಕಾರ ಉಡುಪುಗಳನ್ನು ಧರಿಸುವುದರಿಂದ ಈಶ್ವರಿ ಚೈತನ್ಯದ ಲಾಭವಾಗುತ್ತದೆ ಮತ್ತು ದೇವತೆಯ ತತ್ವದ ಅನೂಭೂತಿ ಬರುತ್ತದೆ. ಆದರೆ ಪಾಶ್ಚಾತ್ಯ ಉಡುಪುಗಳಿಂದ ಕೆಟ್ಟ ಶಕ್ತಿಗಳಿಗೆ ಆಮಂತ್ರಣ ನೀಡಿದಂತಾಗುತ್ತದೆ. ಆದ್ದರಿಂದ ದೇವಸ್ಥಾನಗಳಲ್ಲಿ ಅವುಗಳ ಪಾವಿತ್ರ‍್ಯತೆ ಮತ್ತು ಆಧ್ಯಾತ್ಮಿಕ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಭಕ್ತರ ಆದ್ಯ ಕರ್ತವ್ಯವಾಗಿದೆ. ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರು ಸಾತ್ವಿಕ ಉಡುಪುಗಳನ್ನು ಧರಿಸಿ ಬರಲು ನಿಯಮವನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಂ.ವಿ ಹೆಗಡೆ, ಎಂ.ಎಸ್ ಹೆಗಡೆ, ಜಿ.ಎಸ್ ಗೌಡ, ಶಂಕರ ಗೌಡ, ಮಾಧವ ಪಂಡಿತ್, ದೇವಪ್ಪ ಜಿ ನಾಯ್ಕ್, ಶಂಭು ಕೇಶವ ಗೌಡ, ಶ್ರೀಧರ ಹೆಗಡೆ, ಗೌರೀಶ್ ಗೌಡ, ಶರತ್ ಕುಮಾರ್ ನಾಯ್ಕ, ಗೌರೀಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮುರುಡೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಹಿಂದೂ ಸಂಘಟನೆಗಳ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.