ETV Bharat / state

ಹಲವು ಮನೆಗಳ ಗೋಡೆ ಕುಸಿತ: ಆತಂಕದಲ್ಲಿ ಬೊಳ್ವೆ ಗ್ರಾಮಸ್ಥರು! - homes wall collapse in karwar

ಕಾರವಾರದ ಕದ್ರಾ ಜಲಾಶಯದಿಂದ ನಿರಂತರವಾಗಿ ನೀರು ಹರಿಬಿಟ್ಟ ಕಾರಣ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ವೆ ಗ್ರಾಮದಲ್ಲಿ ಹಲವು ಮನೆಗಳ ಗೋಡೆಗಳು ಕುಸಿದಿದ್ದು, ಗ್ರಾಮಸ್ಥರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.

karwar
ಹಲವು ಮನೆಗಳ ಗೋಡೆ ಕುಸಿತ
author img

By

Published : Jul 26, 2021, 8:53 AM IST

ಕಾರವಾರ: ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಡುಗಡೆ ಮಾಡಿದ ಪರಿಣಾಮ ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಳ್ವೆ ಗ್ರಾಮದಲ್ಲಿ ಹಲವು ಮನೆಗಳ ಗೋಡೆಗಳು ಕುಸಿದಿವೆ.

ಹಲವು ಮನೆಗಳ ಗೋಡೆ ಕುಸಿತ

ಕಾರವಾರದ ಕದ್ರಾ ಜಲಾಶಯದಿಂದ ನಿರಂತರವಾಗಿ ನೀರು ಹರಿಬಿಟ್ಟ ಕಾರಣ ಕಾಳಿನದಿ ಉಕ್ಕಿ ಹರಿದು ಮನೆಗಳ ಗೋಡೆಗಳು ಕುಸಿಯುತ್ತಿದ್ದು, ಇಲ್ಲಿನ ಗ್ರಾಮಸ್ಥರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಇಲ್ಲಿನ ಬಹುತೇಕರು ಕೃಷಿಯನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. 2019ರಲ್ಲಿ ಭಾರಿ ಮಳೆ ಸುರಿದು, ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿತ್ತು. ಆಗಲೂ ಹಲವು ಮನೆಗಳಿಗೆ ನೀರು ನುಗ್ಗಿ, ಗೋಡೆಗಳು ಕುಸಿದು ಬಿದ್ದಿದ್ದವು. ಈ ವರ್ಷವೂ ಕೂಡ ಅದೇ ಪರಿಸ್ಥಿತಿ ಉದ್ಭವವಾಗಿದೆ.

ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಮನೆಗಳೇ ಇಲ್ಲದೆ ಜನರು ಬೀದಿಯಲ್ಲಿ ವಾಸ್ತವ್ಯ ಹೂಡಬೇಕಾಗಲಿದೆ ಎನ್ನುತ್ತಾರೆ ಗ್ರಾಮಸ್ಥರು. ಹೀಗಾಗಿ, ಸಂಬಂಧಪಟ್ಟ ಅಧಿಕಾರಿಗಳು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಪರಿಹಾರ ಒದಗಿಸಿ, ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಬೊಳ್ವೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಜ್ಜೈನಿ ಮಹಾಕಾಳ ದೇವಸ್ಥಾನದಲ್ಲಿ ಅದ್ಧೂರಿಯಾಗಿ 'ಬೊನಾಲು' ಆಚರಣೆ: ವಿಡಿಯೋ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.