ETV Bharat / state

ಕೊನೆಯ 'ಆಟ' ಮುಗಿಸಿದ ಹೊಸ್ತೋಟ ಮಂಜುನಾಥ ಭಾಗವತ: ಕಳಚಿತು ಯಕ್ಷಲೋಕದ ಅಮೂಲ್ಯ ಕೊಂಡಿ - ಹೊಸ್ತೋಟ ಮಂಜುನಾಥ ಭಾಗವತ ನಿಧನ

ಯಕ್ಷಗಾನಕ್ಕಾಗಿ ಇಡೀ ಬದುಕನ್ನೇ ಸಮರ್ಪಿಸಿದ ಹೊಸ್ತೋಟ ಮಂಜುನಾಥ ಭಾಗವತ (80) ಮಂಗಳವಾರ ನಿಧನರಾಗಿದ್ದು, ಯಕ್ಷಲೋಕ 300ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ ಮೇರು ವ್ಯಕ್ತಿತ್ವ ಅವರದ್ದಾಗಿದೆ.

Hostota Manjunatha Bhagavat
ಹೊಸ್ತೋಟ ಮಂಜುನಾಥ ಭಾಗವತ
author img

By

Published : Jan 7, 2020, 5:37 PM IST

ಶಿರಸಿ: ಯಕ್ಷಗಾನಕ್ಕಾಗಿ ಇಡೀ ಬದುಕನ್ನೇ ಮುಡಿಪಾಗಿಟ್ಟ ಹೊಸ್ತೋಟ ಮಂಜುನಾಥ ಭಾಗವತ (80) ಮಂಗಳವಾರ ನಿಧನರಾಗಿದ್ದು, ಯಕ್ಷಲೋಕ ದಿಗ್ಗಜನನ್ನು ಕಳೆದುಕೊಂಡಿದೆ.

Hostota Manjunatha Bhagavat
ಯಕ್ಷಗಾನ ಕಲಾವಿದ ಹೊಸ್ತೋಟ ಮಂಜುನಾಥ ಭಾಗವತ (ಸಂಗ್ರಹ ಚಿತ್ರ)

ತೀವ್ರ ಅನಾರೋಗ್ಯದಿಂದ ಬಲಳುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 15 ದಿನಗಳಿಂದ ಸಂಪೂರ್ಣ ಹಾಸಿಗೆ ಹಿಡಿದಿದ್ದ ಮಂಜುನಾಥ ಭಾಗವತರನ್ನು ಅಭಿಮಾನಿಗಳು ಆರೈಕೆ ಮಾಡುತ್ತಿದ್ದರು. ಯಕ್ಷಗಾನದ ಆಕರ್ಷಕ ಭಾಗವತಿಕೆ, ನೃತ್ಯ, ಚಂಡೆ, ಮದ್ದಲೆ ವಾದನ, ವೇಷಗಾರಿಕೆ, ಅರ್ಥಗಾರಿಕೆ ಹೀಗೆ ಯಕ್ಷಗಾನದ ಎಲ್ಲಾ ವಿಭಾಗಗಳಲ್ಲೂ ಅವರು ಪರಿಣತರಾಗಿದ್ದರು. ಸರಿ ಸುಮಾರು 300ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ ಮೇರು ವ್ಯಕ್ತಿತ್ವ ಮಂಜುನಾಥ್ ಭಾಗವತರದ್ದು.

Hostota Manjunatha Bhagavat
ಯಕ್ಷಗಾನ ಕಲಾವಿದ ಹೊಸ್ತೋಟ ಮಂಜುನಾಥ ಭಾಗವತ (ಸಂಗ್ರಹ ಚಿತ್ರ)

ಮಂಜುನಾಥ ಭಾಗವತರು, ಸುಮಾರು 75 ಸ್ಥಳಗಳಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳನ್ನು ನಡೆಸಿ 1,600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. 1990ರಲ್ಲಿ ಶಿವಮೊಗ್ಗದ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಅಂಧ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡಿ, ದಾಖಲೆ ಬರೆದರು. ಈ ಶಾಲೆಯ ಮಕ್ಕಳು ‘ಕಂಸವಧೆ’ ಪ್ರಸಂಗವನ್ನು 200ಕ್ಕೂ ಹೆಚ್ಚು ಕಡೆಗಳಲ್ಲಿ ಪ್ರದರ್ಶಿಸಿದ್ದರು.

ಸಾಧಕನಿಗೆ ಸಂದ ಪ್ರಶಸ್ತಿಗಳು:

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿಸುಬ್ಬ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪುರಸ್ಕಾರ, ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ , ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅವರಿಗೆ ಒಲಿದಿದೆ.

Intro:ಶಿರಸಿ: ಯಕ್ಷಗಾನಕ್ಕಾಗಿ ಇಡೀ ಬದುಕನ್ನೇ ಸಮರ್ಪಿಸಿದ ಹೊಸ್ತೋಟ ಮಂಜುನಾಥ ಭಾಗವತ (80) ಮಂಗಳವಾರ ನಿಧನರಾಗಿದ್ದು, ಯಕ್ಷ ಲೋಕ ದಿಗ್ಗಜನೊರ್ವವನ್ನು ಕಳೆದುಕೊಂಡಂತಾಗಿದೆ.

ಕೆಲ ಕಾಲದಿಂದ ಅನಾರೋಗ್ಯಕ್ಕೆ ಒಳಗಾಗುದ್ದ ಅವರು ಆಸ್ಪತ್ರೆಯಲ್ಲಿದ್ದರು. 15 ದಿನಗಳಿಂದ ಸಂಪೂರ್ಣ ಹಾಸಿಗೆ ಹಿಡಿದಿದ್ದ ಅವರಿಗೆ ಅಭಿಮಾನಿಗಳು ಆರೈಕೆ ಮಾಡುತ್ತಿದ್ದರು.

ಯಕ್ಷಗಾನದ ಭಾಗವತಿಕೆ, ನೃತ್ಯ, ಚಂಡೆ, ಮದ್ದಲೆ ವಾದನ, ವೇಷಗಾರಿಕೆ, ಅರ್ಥಗಾರಿಕೆ ಹೀಗೆ ಎಲ್ಲ ವಿಭಾಗಗಳಲ್ಲೂ ಅವರು ತಜ್ಞತೆ ಹೊಂದಿದ್ದರು. 300ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳನ್ನು ರಚಿಸಿದ ಮೇರು ವ್ಯಕ್ತಿತ್ವ ಅವರದ್ದಾಗಿದೆ.

ಸುಮಾರು 75 ಸ್ಥಳಗಳಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳನ್ನು ನಡೆಸಿ, 1600ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. 1990ರಲ್ಲಿ ಶಿವಮೊಗ್ಗದ ಶ್ರೀ ಶಾರದಾದೇವಿ ಅಂಧರ ವಿಕಾಸ ಕೇಂದ್ರದ ಅಂಧ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡಿ, ದಾಖಲೆ ಬರೆದವರು ಹೊಸ್ತೋಟ ಭಾಗವತರು. ಈ ಶಾಲೆಯ ಮಕ್ಕಳು ‘ಕಂಸವಧೆ’ ಪ್ರಸಂಗವನ್ನು 200ಕ್ಕೂ ಹೆಚ್ಚು ಕಡೆಗಳಲ್ಲಿ ಪ್ರದರ್ಶಿಸಿದ್ದರು.

Body:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪಾರ್ತಿಸುಬ್ಬ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪುರಸ್ಕಾರ, ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ , ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅವರಿಗೆ ಒಲಿದಿದೆ.
.............
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.