ಕಾರವಾರ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಯೋಜನೆ ವಿರೋಧಿ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜನರ ಬಹುವರ್ಷಗಳ ಕನಸಾಗಿದ್ದ ರೈಲ್ವೇ ಯೋಜನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹುಬ್ಬಳ್ಳಿ ಅಂಕೋಲಾ ಯೋಜನೆಯಿಂದ ಸಾವಿರಾರು ಎಕರೆ ಗಿಡಮರಗಳಿಗೆ ಹಾನಿಯಾಗುತ್ತದೆ. ಪ್ರಾಣಿ ಸಂಕುಲಕ್ಕೂ ಸಹ ಹಾನಿಯಾಗಲಿದ್ದು, ಯೋಜನೆ ಬೇಡ ಎನ್ನುವವರು ಅರಣ್ಯ ಇಲಾಖೆಗೆ ಪತ್ರ ಬರೆಯುವಂತೆ ಸಂದೇಶ ಪೋಸ್ಟ್ ಮಾಡುತ್ತಿದ್ದು ಇದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆಯೂ ಯೋಜನೆಗೆ ಪರಿಸರವಾದಿಗಳಿಂದ ವಿರೋಧದ ಕೂಗುಗಳು ಕೇಳಿ ಬಂದಿದ್ದು, ಹೈಕೋರ್ಟ್ ಕಳೆದ ಆಗಸ್ಟ್ 17 ರಂದು ಹತ್ತು ವಾರದಲ್ಲಿ ರಾಷ್ಟ್ರೀಯ ವನ್ಯಜೀವಿ ಮಂಡಳಿಯವರು ಯೋಜನೆ ಅನುಷ್ಠಾನ ಸಂಬಂಧ ವರದಿ ನೀಡುವಂತೆ ಸೂಚನೆ ನೀಡಿತ್ತು. ಆದರೆ, ವರದಿಗೆ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಪೋಸ್ಟ್ಗಳನ್ನು ಹರಿಬಿಟ್ಟಿರುವುದು ಸ್ಥಳೀಯರ ಸಿಟ್ಟಿಗೆ ಕಾರಣವಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಹೈಕೋರ್ಟ್ ತಾತ್ಕಾಲಿಕ ತಡೆ..!