ETV Bharat / state

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ: ಕಡಲತೀರದಲ್ಲಿ ಲಂಗರು ಹಾಕಿದ ನೂರಾರು ಬೋಟ್‌ಗಳು

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಮೀನುಗಾರಿಕಾ ಇಲಾಖೆ ಸೂಚನೆ ನೀಡಿದೆ.

hundreds-of-boats-anchored-on-the-beach-in-karwar-for-bad-weather-in-the-arabian-sea
ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ: ಕಡಲತೀರದಲ್ಲಿ ಲಂಗರು ಹಾಕಿದ ನೂರಾರು ಬೋಟ್‌ಗಳು
author img

By ETV Bharat Karnataka Team

Published : Sep 30, 2023, 10:23 PM IST

Updated : Sep 30, 2023, 10:45 PM IST

ಕಾರವಾರ ಕಡಲತೀರದಲ್ಲಿ ಲಂಗರು ಹಾಕಿದ ನೂರಾರು ಬೋಟ್‌ಗಳು

ಕಾರವಾರ: ಹವಮಾನ ವೈಪರೀತ್ಯದಿಂದಾಗಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಮೀನುಗಾರಿಕೆಗೆ ತೆರಳದಂತೆ ಮೀನುಗಾರಿಕಾ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆ ನೂರಾರು ಮೀನುಗಾರಿಕಾ ಬೋಟ್‌ಗಳು ಕಾರವಾರದ ಕಡಲತೀರದ ಬಳಿ ಲಂಗರು ಹಾಕಿ ಆಶ್ರಯ ಪಡೆದುಕೊಂಡಿವೆ.

ಕಳೆದ ಎರಡು ದಿನದಿಂದ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ಅಂತಾ ರಾಜ್ಯದ ಮೀನುಗಾರಿಕೆ ಬೋಟ್‌ಗಳು ನಗರದ ಕಡಲತೀರಕ್ಕೆ ಆಗಮಿಸಿ ಲಂಗರು ಹಾಕಲು ಆರಂಭಿಸಿವೆ. ಈವರೆಗೆ ಸುಮಾರು 200 ಬೋಟುಗಳು ರವೀಂದ್ರನಾಥ ಟಾಗೋರ್ ಕಡಲತೀರ ಹಾಗೂ ಬಂದರು ತೀರ ಪ್ರದೇಶಗಳಲ್ಲಿ ಲಂಗರು ಹಾಕಿವೆ. ಇವುಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಇನ್ನು ಕಡಲಲ್ಲಿ ಅಲೆಗಳ ಭೋರ್ಗರೆತ ಜೋರಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆಯಾಗಿ ರೆಡ್ ಫ್ಲ್ಯಾಗ್​ಗಳನ್ನು ಅಳವಡಿಸಲಾಗಿದೆ.

ಆದರೆ ಇದನ್ನು ಲೆಕ್ಕಿಸದೇ ಪ್ರವಾಸಿಗರು ಕಡಲಿಗಿಳಿದು ಮೋಜು ಮಸ್ತಿಯಲ್ಲಿ ತೊಡಗುತ್ತಿದ್ದಾರೆ. ಈಗಾಗಲೇ ಕಳೆದೆರಡು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿರುವ ಕಾರಣ ಕಡಲು ಪ್ರಕ್ಷುಬ್ಧಗೊಂಡಿದೆ. ಕೊಂಚ ಎಡವಿದರೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿದ್ದು, ಈ ಬಗ್ಗೆ ಜಿಲ್ಲಾಡಳಿತ ಗಮನಹರಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಇನ್ನು ಆಂಕರ್ ತುಂಡಾಗಿ ಮೀನುಗಾರಿಕಾ ಬೋಟೊಂದು ಕಾರವಾರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ದಡಕ್ಕೆ ಅಪ್ಪಳಿಸಿದೆ.

ಮಂಗಳೂರು ಮೂಲದ ಮಿಸ್ಬಾ ಹೆಸರಿನ ಮೀನುಗಾರಿಕಾ ಬೋಟು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬಂದರಿನಲ್ಲಿ ನಿಂತಿತ್ತು. ಆದರೆ, ಈ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಆಂಕರ್ ತುಂಡಾಗಿ ಕಡಲತೀರಕ್ಕೆ ಬಂದು ಅಪ್ಪಳಿಸಿದೆ. ಬೋಟಿನಲ್ಲಿದ್ದ ಮೀನುಗಾರರು ಸುರಕ್ಷಿತವಾಗಿದ್ದು, ಅಲೆಗಳ ಅಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ಬೋಟು ರಕ್ಷಣಾ ಕಾರ್ಯ ವಿಳಂಬವಾಗಿದೆ.

ಭಾರಿ ಮಳೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಇನ್ನು 3 ರಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಂತ ಘಟನೆಗಳು ಸಂಭವಿಸಿದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ. ವರ್ಚುಯಲ್ ಸಭೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ ಅವರು, ಸಮುದ್ರ ಪ್ರಕ್ಷುಬ್ಧ ಗೊಂಡಿರುವ ಕಾರಣ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಲ್ಲ ಮೀನುಗಾರರಿಗೆ ಅಗತ್ಯ ಮಾಹಿತಿಯನ್ನು ಮೀನುಗಾರಿಕಾ ಇಲಾಖೆ ತಲುಪಿಸುವಂತೆ ಸೂಚನೆ ನೀಡಿದರು.

ಮನೆ ಕುಸಿತದಿಂದ ಜೀವಹಾನಿ ಹಾಗೂ ಜಾನುವಾರು ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಈ ಬಗ್ಗೆ ಪಂಚಾಯಿತಿ ಮೂಲಕ ಜಾಗೃತಿ ಮೂಡಿಸುವಂತೆ ಹಾಗೂ ತೀರಾ ಹಳೆಯ ಮನೆಗಳಲ್ಲಿ ವಾಸ ಮಾಡುತ್ತಿರುವವರಿಗೆ ಮಳೆ ನಿಲ್ಲುವವರೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಲು ಸೂಚಿಸಿದರು. ಗ್ರಾಮಗಳಲ್ಲಿ ಚರಂಡಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕು. ಮುಂಜಾಗೃತವಾಗಿ ಕಾಳಜಿ ಕೇಂದ್ರ ತೆರೆಯಲು ಸ್ಥಳ ಗುರುತಿಸಿಕೊಟ್ಟುಕೊಳ್ಳಬೇಕು. ದೋಣಿಗಳನ್ನು ಸಿದ್ಧ ಪಡಿಸಿಟ್ಟುಕೊಳ್ಳಬೇಕು. ಮಳೆಯಿಂದ ಹಾನಿಯಾದ ಪ್ರಕರಣಗಳಲ್ಲಿ ಆದಷ್ಟು ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಸೂಚನೆ ನೀಡಿದ ಅವರು, ಪರಿಹಾರ ನೀಡಲು ಹಣದ ಕೊರತೆಯಿಲ್ಲ ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಅಂಕೋಲ ಮತ್ತು ಹೊನ್ನಾವರದಲ್ಲಿ ಇರುವ ಎಸ್​ಡಿಆರ್​ಎಫ್ ತಂಡಗಳಿಗೆ ಅಗತ್ಯ ಬಿದಲ್ಲಿ ತಕ್ಷಣ ನೆರವಿಗೆ ಸಿದ್ಧವಿರುವಂತೆ ಸೂಚನೆ ನೀಡಿದರು. ಭೂ ಕುಸಿತ ಸಂಭವಿಸಬಹುದಾದ ಪ್ರದೇಶಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಆ ಪ್ರದೇಶದಲ್ಲಿ ವಾಸಿಸುಸುವ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡುವಂತೆ ತಿಳಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ: ತುಂಗಾ ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರ ರಕ್ಷಣೆ

Last Updated : Sep 30, 2023, 10:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.