ಶಿರಸಿ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ತಮ್ಮ ಕಾರ್ಯಕರ್ತರಿಗೆ ವಿಡಿಯೋ ಸಂದೇಶವನ್ನು ಕಳಿಸಿದ್ದು, ಆದಷ್ಟು ಶೀಘ್ರದಲ್ಲಿ ಕೊರೊನಾದಿಂದ ಗುಣಮುಖರಾಗಿ ಬಡವರ ಸೇವೆಗೆ ಮರಳುವುದಾಗಿ ತಿಳಿಸಿದ್ದಾರೆ.
ಸೋಂಕು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ತಮ್ಮ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವ ಅವರು, ವಿಡಿಯೋ ಮೂಲಕ ಸಂದೇಶ ಕಳಿಸಿದ್ದಾರೆ. ಹಿತೈಷಿ, ಕಾರ್ಯಕರ್ತರ ಪೂಜೆ ಪುನಸ್ಕಾರ, ಹಾರೈಕೆ ಹಾಗೂ ಬಡವರ ಪ್ರೀತಿಯ ಆಧಾರದ ಮೇಲೆ ಶೀಘ್ರದಲ್ಲಿ ಗುಣಮುಖರಾಗಿ ತಮ್ಮ ಸೇವೆಗೆ ಬರುತ್ತೇನೆ ಎಂದು ಹೇಳಿದ್ದಾರೆ.
ಅತಿ ಶೀಘ್ರದಲ್ಲಿ ಕೋವಿಡ್ ಗೆದ್ದು, ಜನರ ನಡುವೆ ಬಂದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ವಿಶ್ವಾಸದ ನುಡಿಗಳನ್ನಾಡಿದರು.