ETV Bharat / state

ಭಟ್ಕಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರ ಬಂಧನ - Bhatkal police

ಭಟ್ಕಳ ಸಹರಾ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 60 ಲಕ್ಷ ರೂ.ಮೌಲ್ಯದ ಚಿನ್ನದ ಬಿಸ್ಕೆಟ್ ಹಾಗೂ 2 ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದ್ದಾರೆ.

ಭಟ್ಕಳ ಪೊಲೀಸರ ಕಾರ್ಯಾಚರಣೆ
ಭಟ್ಕಳ ಪೊಲೀಸರ ಕಾರ್ಯಾಚರಣೆ
author img

By

Published : Aug 6, 2020, 1:08 PM IST

ಭಟ್ಕಳ(ಉತ್ತರ ಕನ್ನಡ): ಭಟ್ಕಳದ ಸಹರಾ ಠಾಣಾ ಪೊಲೀಸರು ತಡರಾತ್ರಿ ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 60 ಲಕ್ಷ ರೂ.ಮೌಲ್ಯದ ಚಿನ್ನದ ಬಿಸ್ಕೆಟ್ ಹಾಗೂ 2 ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರ ಠಾಣಾ ವ್ಯಾಪ್ತಿಯ ಮುಖ್ಯರಸ್ತೆ ಹೂವಿನ ಚೌಕ ಕ್ರಾಸ್ ಸಮೀಪ ದಾಳಿ ನಡೆಸಿದ ಪೊಲೀಸರು ಶೈಲೇಶ ಮಹಾದೇವ ಪಾಟೀಲ (33) ಹಾಗೂ ಸಂಜಯ ದೇಶಮುಖ ಎಂಬವರನ್ನು ಬಂಧಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳು ಹುಬ್ಬಳ್ಳಿ ಮೂಲದವರು ಎಂದು ತಿಳಿದು ಬಂದಿದೆ.

ನಿನ್ನೆ ತಡರಾತ್ರಿ ಕಾರಿನಲ್ಲಿ ಸುಮಾರು 60 ಲಕ್ಷ ಮೌಲ್ಯದ ಒಂದು ಚಿನ್ನದ ಬಿಸ್ಕೆಟ್ ಹಾಗೂ 2 ಚಿನ್ನದ ಗಟ್ಟಿಗಳನ್ನು ಎಲ್ಲಿಂದಲೋ ಕಳವು ಮಾಡಿಕೊಂಡು ಅಕ್ರಮವಾಗಿ ಮಾರಲು ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗ್ತಿದೆ. ಈ ವೇಳೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವರನ್ನು ಕಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಗರ ಠಾಣೆಯ ಪಿಎಸ್​ಐ ಭರತ್ ಕುಮಾರ್ ಹಾಗೂ ಸಿಬ್ಬಂದಿ ಕೃಷ್ಣಾನಂದ ನಾಯ್ಕ, ಮಾಳಪ್ಪ, ಬಸವಣ್ಣೆಪ್ಪ ಜಕಾತಿ, ಅಣ್ಣಪ್ಪ ನಾಯ್ಕ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಚಿನ್ನ ಇರುವುದು ಬೆಳಕಿಗೆ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.