ETV Bharat / state

ಪೊಲೀಸರ ಭರ್ಜರಿ ಬೇಟೆ: ಬೈಂದೂರಿನಲ್ಲಿ 61.5 ಲಕ್ಷ ಮೌಲ್ಯದ ಚಿನ್ನಾಭರಣ ವಶ, ಮೂವರ ಬಂಧನ - Illegal gold shipping Accused arrest by police

ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಮಾರ್ಗದರ್ಶನದಲ್ಲಿ ಕುಂದಾಪುರ ಹಾಗೂ ಭಟ್ಕಳ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದು, ಒಟ್ಟು 61.47 ಲಕ್ಷ ರೂ. ಬೆಲೆಬಾಳುವ 1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

Illegal gold shipping Accused arrest in Bainduru
ಮೂವರ ಬಂಧನ
author img

By

Published : Dec 18, 2019, 10:46 AM IST

ಭಟ್ಕಳ: ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಮಾರ್ಗದರ್ಶನದಲ್ಲಿ ಕುಂದಾಪುರ ಹಾಗೂ ಭಟ್ಕಳ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್ ಉಮ್ಮೆರ್ ಭಟ್ಕಳ್ ಬಂಧಿತರು. ಬಂಧಿತರಿಂದ ಒಟ್ಟು 61.47 ಲಕ್ಷ ರೂ. ಬೆಲೆಯ 1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಹಾಗೂ ‌ಭಟ್ಕಳ ಎಎಸ್‌ಪಿಗಳ ತಂಡ ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ.

ದಾಖಲೆಗಳಿಲ್ಲದೆ ಕೇರಳದ ಎರ್ನಾಕುಲಂ ಕಡೆಯಿಂದ ಅಕ್ರಮವಾಗಿ‌ ರೈಲಿನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವ ಮಾಹಿತಿ ಪಡೆದ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಈ ಬಗ್ಗೆ ಕಾರ್ಯೋನ್ಮುಖರಾಗಿದ್ದು, ಕುಂದಾಪುರ, ಬೈಂದೂರು, ಭಟ್ಕಳ ರೈಲು ನಿಲ್ದಾಣಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಿದ್ದರು. ಬೈಂದೂರು ರೈಲು ನಿಲ್ದಾಣದಲ್ಲಿ ಮಹಮದ್ ಇಸ್ಮಾಯಿಲ್ ಭಟ್ಕಳ ಎಂಬಾತನಿಂದ 253 ಗ್ರಾಂ ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಟ್ಕಳದಲ್ಲಿ ರಾಹೀಫ್ ಎಂಬಾತನಿಂದ 1.166 ಕೆಜಿ ಚಿನ್ನಾಭರಣ ಮತ್ತು ಸಯ್ಯದ್ ಉಮ್ಮೆರ್ ಎಂಬಾತನಿಂದ 213 ಗ್ರಾಂ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಉಡುಪಿ ಎಸ್‌ಪಿ ಮಾರ್ಗದರ್ಶನದಲ್ಲಿ ಭಟ್ಕಳ ಎಎಸ್‌ಪಿ ನಿಖಿಲ್, ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್, ಬೈಂದೂರು ಸಿಪಿಐ ಸುರೇಶ್ ನಾಯಕ್, ಉಡುಪಿ ಸಿಪಿಐ ಮಂಜುನಾಥ, ಕುಂದಾಪುರ ಎಸ್‌ಐ ಹರೀಶ್ ಆರ್. ನಾಯ್ಕ್, ಭಟ್ಕಳ, ಕುಮಟಾ‌ ಪಿಸ್‌ಐಗಳು, ಪ್ರೊಬೇಶನರಿ ಪಿಎಸ್ಐ ಸುದರ್ಶನ್, ಕುಂದಾಪುರ ಎಎಸ್‌ಪಿ ತಂಡದ ಮೋಹನ್, ಸಂತೋಷ್ ಕೊರವಡಿ, ಸಂತೋಷ್ ಹೊನ್ನಾಳ, ಮಂಜುನಾಥ, ಕೃಷ್ಣ, ಪ್ರಿನ್ಸ್, ಚಂದ್ರಶೇಖರ, ವಿಜಯ ಕುಮಾರ್, ಸಲೀಂವುಲ್ಲಾ ಕಾರ್ಯಾಚರಣೆ ನಡೆಸಿದ್ದರು.

Intro:ಭಟ್ಕಳ: ಉಡುಪಿ ಜಿಲ್ಲಾ ಎಸ್ಪಿ ನಿಶಾ ಜೇಮ್ಸ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಹಾಗೂ ಭಟ್ಕಳ ಉಪವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್ ಉಮ್ಮೆರ್ ಭಟ್ಕಳ್ ಬಂಧಿತರು. ಬಂಧಿತರಿಂದ ಒಟ್ಟು 61.47 ಲಕ್ಷ ರೂ. ಬೆಲೆಯ 1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಹಾಗೂ ‌ಭಟ್ಕಳ ಎಎಸ್‌ಪಿಗಳ ತಂಡ ಈ ಭರ್ಜರಿ ಕಾರ್ಯಾಚರಣೆ ನಡೆಸಿದೆ.Body:ದಾಖಲೆಗಳಿಲ್ಲದೇ ಎರ್ನಾಕುಲಂ ಕಡೆಯಿಂದ ಅಕ್ರಮವಾಗಿ‌ ರೈಲಿನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವ ಮಾಹಿತಿ ಪಡೆದ ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್ ಈ ಬಗ್ಗೆ ಕಾರ್ಯೋನ್ಮುಖರಾಗಿದ್ದು ಕುಂದಾಪುರ, ಬೈಂದೂರು, ಭಟ್ಕಳ ರೈಲು ನಿಲ್ದಾಣಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಿದ್ದರು. ಬೈಂದೂರು ರೈಲು ನಿಲ್ದಾಣದಲ್ಲಿ ಮಹಮದ್ ಇಸ್ಮಾಯಿಲ್ ಭಟ್ಕಳ ಎಂಬಾತನಿಂದ 253 ಗ್ರಾಂ ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಯಿತು. ಭಟ್ಕಳದಲ್ಲಿ ರಾಹೀಫ್ ಎನ್ನುವಾತನಿಂದ 1.166 ಕೆಜಿ ಚಿನ್ನಾಭರಣ ಮತ್ತು ಸಯ್ಯದ್ ಉಮ್ಮೆರ್ ಎಂಬಾತನಿಂದ 213 ಗ್ರಾಂ ತೂಕದ ಚಿನ್ನ ವಶಪಡಿಸಿಕೊಳ್ಳಲಾಯಿತು.

ಉಡುಪಿ ಎಸ್‌ಪಿ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಎಎಸ್‌ಪಿ ನಿಖಿಲ್, ಕುಂದಾಪುರ ಎಎಸ್‌ಪಿ ಹರಿರಾಮ್ ಶಂಕರ್, ಬೈಂದೂರು ಸಿಪಿಐ ಸುರೇಶ್ ನಾಯಕ್, ಉಡುಪಿ ಸಿಪಿಐ ಮಂಜುನಾಥ, ಕುಂದಾಪುರ ಎಸ್‌ಐ ಹರೀಶ್ ಆರ್. ನಾಯ್ಕ್ , ಭಟ್ಕಳ, ಕುಮಟಾ‌ ಪಿಸ್‌ಐಗಳು, ಪ್ರೊಬೇಶನರಿ ಪಿಎಸ್ಐ ಸುದರ್ಶನ್, ಕುಂದಾಪುರ ಎಎಸ್‌ಪಿ ತಂಡದ ಮೋಹನ್, ಸಂತೋಷ್ ಕೊರವಡಿ, ಸಂತೋಷ್ ಹೊನ್ನಾಳ, ಮಂಜುನಾಥ, ಕೃಷ್ಣ, ಪ್ರಿನ್ಸ್, ಚಂದ್ರಶೇಖರ, ವಿಜಯ ಕುಮಾರ್, ಸಲೀಂವುಲ್ಲಾ ಕಾರ್ಯಾಚರಣೆ ನಡೆಸಿದ್ದರುConclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.