ಕಾರವಾರ : ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಅಂಕೋಲಾ ತಾಲೂಕಿನ ಅಡ್ಲೂರು ಬಳಿ ನಡೆದಿದೆ.
ಮಹಾರಾಷ್ಟ್ರ ಮೂಲದ ಲಾರಿ, ಗೋವಾದಿಂದ ಹುಬ್ಬಳ್ಳಿ ಕಡೆಗೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿ ವಿವಿಧ ಬ್ರಾಂಡ್ಗಳ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಲಾರಿ ಪಲ್ಟಿಯಾದ ಬೆನ್ನಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆ.
ಓದಿ : ಬಟ್ಟೆ ವ್ಯಾಪಾರದ ಜತೆ ಡ್ರಗ್ಸ್ ದಂಧೆ ಆರೋಪ: ಚಿಕ್ಕಬಳ್ಳಾಪುರದಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್ಸ್ ಅರೆಸ್ಟ್
ಲಾರಿಯಲ್ಲಿದ್ದ ಗೋವಾ ಮದ್ಯದ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ಐದು ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಇರಬಹುದು ಎಂದು ಅಂದಾಜಿಸಲಾಗಿದೆ.
ಗೋವಾ ಗಡಿಭಾಗದಲ್ಲಿ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಪರಿಶೀಲಿಸುತ್ತಿದ್ದರೂ, ಇಷ್ಟೊಂದು ಮೌಲ್ಯದ ಮದ್ಯ ರಾಜಾರೋಷವಾಗಿ ಸಾಗಾಟವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.