ETV Bharat / state

ಐದು ಜಿಲ್ಲೆಗಳಲ್ಲಿ ಕೊರೊನಾ ರಣಕೇಕೆ : ಯಾವ ಯಾವ ಜಿಲ್ಲೆಯಲ್ಲಿ ಎಷ್ಟು..?

ಇಂದು ಉತ್ತರ ಕನ್ನಡ, ಕೊಪ್ಪಳ, ಹಾವೇರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ.

Increasing corona infection in six districts
ಆರು ಜಿಲ್ಲೆಗಳಲ್ಲಿ ಕೊರೊನಾ ರಣಕೇಕೆ
author img

By

Published : Oct 11, 2020, 11:48 PM IST

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 649 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಮತ್ತೆ 115 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಸೋಂಕು ಪತ್ತೆಯಾದ ಪೈಕಿ ಕಾರವಾರದ 11, ಅಂಕೋಲಾ 2, ಕುಮಟಾ 55, ಶಿರಸಿ 1, ಸಿದ್ದಾಪುರ 7, ಯಲ್ಲಾಪುರ 1, ಹಳಿಯಾಳ 37, ಜೊಯಿಡಾದ ಓರ್ವರಿಗೆ ಸೋಂಕು ಧೃಡಪಟ್ಟಿದೆ. ಇನ್ನು ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಕಾರವಾರದ 30, ಅಂಕೋಲಾ 26, ಕುಮಟಾ 63, ಹೊನ್ನಾವರ 115, ಭಟ್ಕಳ 40, ಶಿರಸಿ 175, ಸಿದ್ದಾಪುರ 17, ಯಲ್ಲಾಪುರ 44, ಮುಂಡಗೋಡ 74 ಹಾಗೂ ಹಳಿಯಾಳದ 65 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 11,197 ಪ್ರಕರಣಗಳು ಪತ್ತೆಯಾಗಿದ್ದು, 9697 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 135 ಮಂದಿ ಸಾವನ್ನಪ್ಪಿದ್ದು, 1365 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.

ಕೊಪ್ಪಳ ಜಿಲ್ಲೆಯಲ್ಲಿ ಇಂದು 56 ಪಾಸಿಟಿವ್ ಪ್ರಕರಣಗಳು ಪತ್ತೆ : ಜಿಲ್ಲೆಯಲ್ಲಿ ಇಂದು 56 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12517 ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು, ಗಂಗಾವತಿ ತಾಲೂಕಿನಲ್ಲಿ- 15, ಕೊಪ್ಪಳ ತಾಲೂಕಿನಲ್ಲಿ 13, ಕುಷ್ಟಗಿ ತಾಲೂಕಿನಲ್ಲಿ 19 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 09 ಪ್ರಕರಣ ಸೇರಿ ಇಂದು ಒಟ್ಟು 56 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದು ಮೂವರು ಸೋಂಕಿತರು ಸಾವನ್ನಪ್ಪಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 265 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 121 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11151 ಜನರು ಗುಣಮುಖರಾಗಿದ್ದಾರೆ. 965 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 57 ಜನರಿಗೆ ಕೊರೊನಾ ದೃಢ : ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9731ಕ್ಕೇರಿದಂತಾಗಿದೆ. ಬ್ಯಾಡಗಿ ತಾಲೂಕಿನಲ್ಲಿ 2, ಹಾನಗಲ್ ತಾಲೂಕಿನಲ್ಲಿ 5, ಹಾವೇರಿ ತಾಲೂಕಿನಲ್ಲಿ 13, ಹಿರೇಕೆರೂರು ತಾಲೂಕಿನಲ್ಲಿ 10, ರಾಣೆಬೆನ್ನೂರು ತಾಲೂಕಿನಲ್ಲಿ 15, ಶಿಗ್ಗಾವಿ 1, ಸವಣೂರು ತಾಲೂಕಿನಲ್ಲಿ 11 ಪ್ರಕರಣಗಳು ದೃಢಪಟ್ಟಿದೆ. ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 109 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 681 ಜನ ಹೋಂ ಐಸೋಲೇಶನ್​ನಲ್ಲಿದ್ದಾರೆ. 212 ಜನ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 165 ಜನರಿಗೆ ಪಾಸಿಟಿವ್ : ಇಂದು ಜಿಲ್ಲೆಯಲ್ಲಿ 165 ಹೊಸದಾಗಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಲ್ಲಿವರೆಗೆ 10,934 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 140 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆ ಯಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ 9,812 ಜನ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 175 ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆ ಸೇರಿ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ 947 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಲಕೋಟೆ : ಜಿಲ್ಲೆಯಲ್ಲಿ 79 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 129 ಕೊರೊನಾ ಪ್ರಕರಣಗಳು ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 11, 617 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 10,833 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 31, ಬಾದಾಮಿ 23, ಹುನಗುಂದ 21, ಬೀಳಗಿ 4, ಮುಧೋಳ 27, ಜಮಖಂಡಿ 23 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.