ETV Bharat / state

ಉತ್ತರಕನ್ನಡದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ - uttarkannada

66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಸಚಿವ ಶಿವರಾಮ್ ಹೆಬ್ಬಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು..

Kannada Rajyotsava celebration
Kannada Rajyotsava celebration
author img

By

Published : Nov 1, 2021, 2:33 PM IST

ಕಾರವಾರ : 66ನೇ ಕನ್ನಡ ರಾಜ್ಯೋತ್ಸವವನ್ನು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನಡೆಸಿದ ಬಳಿಕ ಪರೇಡ್ ಕಮಾಂಡರ್​ ಮನವಿಯಂತೆ ವಾಹನದಲ್ಲಿ ತೆರಳಿ ಪರೇಡ್ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಪೊಲೀಸ್, ಡಿಎಆರ್, ಮಹಿಳಾ ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್‌ಸಿಸಿ ಸೇರಿದಂತೆ 8 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಮಾತ್ರವಲ್ಲದೆ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

ಉತ್ತರಕನ್ನಡದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

20 ನಿಮಿಷ ತಡವಾಗಿ ನಡೆದ ಧ್ವಜಾರೋಹಣ : ಪ್ರತಿ ವರ್ಷ 9 ಗಂಟೆಗೆ ನಡೆಯುತ್ತಿದ್ದ ಧ್ವಜಾರೋಹಣ ಕಾರ್ಯಕ್ರಮ ಈ ಬಾರಿ ಸಮಯಕ್ಕೆ ಸರಿಯಾಗಿ ಸಚಿವರು ಬಾರದ ಕಾರಣ 20 ನಿಮಿಷ ತಡವಾಗಿ ಮಾಡಲಾಯಿತು. ಇದರಿಂದಾಗಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು, ಪಥಸಂಚಲನ ನಡೆಸಬೇಕಿರುವ ಪೊಲೀಸರು, ವಿದ್ಯಾರ್ಥಿಗಳು ಬಿಸಿಲಿನಲ್ಲಿ ಕಾಯುವಂತಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.