ETV Bharat / state

ಉತ್ತರ ಕನ್ನಡದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಗಮನ ಸೆಳೆದ ಸ್ತಬ್ಧ ಚಿತ್ರಗಳು - ಪೊಲೀಸ್ ಪರೇಡ್ ಮೈದಾನ

ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದ್ದು, ವಿವಿಧ ಇಲಾಖೆಗಳಿಂದ ಕವಾಯತು ಜೊತೆಗೆ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಹಿರಿಮೆ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು.

kannada-rajyotsava-tablos-attarcted-in-uttara-kannada
ಉತ್ತರಕನ್ನಡದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ
author img

By

Published : Nov 1, 2022, 2:14 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ತೆರಳಿ ಪಥಸಂಚಲನ‌ ತಂಡಗಳಿಂದ ಗೌರವ ಸ್ವೀಕರಿಸಿದರು.

ಪೊಲೀಸ್, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಸೇವಾದಳ, ಅರಣ್ಯ ಇಲಾಖೆ ಸೇರಿದಂತೆ ಒಟ್ಟು 13 ತಂಡಗಳು ಪೊಲೀಸ್ ಪರೇಡ್ ಮೈದಾನದಲ್ಲಿ ಸುಂದರ ಕವಾಯತು ಪ್ರದರ್ಶಿಸಿದವು‌. ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು- ನುಡಿ ಹಿರಿಮೆ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ 16 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉತ್ತರಕನ್ನಡದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡ ತಾಯಿ ಭಾವಚಿತ್ರವನ್ನು ಹೊತ್ತ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕನ್ನಡ ರಥವನ್ನು ಆಕರ್ಷಕವಾಗಿ ಅಲಂಕರಿಸಲಾಗಿತ್ತು. ಕಾರವಾರ ಅರಣ್ಯ ವಿಭಾಗದಿಂದ ಪ್ರಸ್ತುತಪಡಿಸಿದ ಗಂಧದಗುಡಿ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು.

ಕೃಷಿ ಇಲಾಖೆ, ಜಲಸಾರಿಗೆ ಮಂಡಳಿ, ಜಿಲ್ಲಾ ಪಂಚಾಯತಿ, ನಗರಸಭೆ, ರೋಟರಿ, ಪಹರೆ ವೇದಿಕೆಯವರು ಪ್ರಸ್ತುತಪಡಿಸಿದ ಸ್ತಬ್ಧಚಿತ್ರಗಳು ಜನಮೆಚ್ಚುಗೆ ಪಡೆದವು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ಇದನ್ನೂ ಓದಿ: ಬೆಳಗಾವಿಯಲ್ಲಿ ‌ಕನ್ನಡ ರಾಜ್ಯೋತ್ಸವ ಸಂಭ್ರಮ.. 10ಸಾವಿರ ಅಡಿ ಕನ್ನಡ ಬಾವುಟದ ಮೆರವಣಿಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.