ಕಾರವಾರ: ಸರ್ಕಾರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಅಳವಡಿಸಿರುವ ಅನ್ಯ ಭಾಷೆ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಕಾರವಾರ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಸಂಘಟನೆಯ ಪದಾಧಿಕಾರಿಗಳು, ಉತ್ತರ ಕನ್ನಡದಲ್ಲಿ ಕನ್ನಡ ನಾಮಫಲಕಗಳು ದಿನ ದಿನೇ ಮಾಯವಾಗುತ್ತಿವೆ. ಇಲ್ಲಿ ಕನ್ನಡ ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಾಮಫಲಕದಲ್ಲಿ ಕನ್ನಡ ನೂರಕ್ಕೆ ನೂರರಷ್ಟು ಇರುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಮಾತನಾಡಿ, ತಿಂಗಳೊಳಗಾಗಿ ಇದನ್ನು ಕಾರ್ಯಗತಗೊಳಿಸಬೇಕು. ಕನ್ನಡ ಹೊರತುಪಡಿಸಿ ಬೇರೆ ಭಾಷೆಗಳಲ್ಲಿ ನಾಫಲಕ ಅಳವಡಿಸಿದರೆ ಜಿಲ್ಲಾಡಳಿತ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬ್ಯಾಂಕ್ಗಳಲ್ಲೂ ಕನ್ನಡದಲ್ಲೇ ವ್ಯವಹಾರ ನಡೆಸಬೇಕು ಎಂದು ಆಗ್ರಹಿಸಿದರು.