ETV Bharat / state

ಒಳ ಮೀಸಲಾತಿ ವರದಿ ಜಾರಿಗೆ ಒತ್ತಾಯ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ - protest news

ಒಳಮೀಸಲಾತಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಕಾರವಾರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

protest-against-government
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
author img

By

Published : Sep 7, 2020, 3:45 PM IST

ಕಾರವಾರ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ಒಳ ಮೀಸಲಾತಿ ವರದಿ ಜಾರಿಗೆ ಮತ್ತು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ರಾಜ್ಯಾದ್ಯಂತ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲವಾಗಿ ಕಾರವಾರದಲ್ಲಿಯೂ ಸಮಿತಿ ಸದಸ್ಯರು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡಿದ್ದರು.

ಪ್ರತಿಭಟನೆ ನಡೆಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು

ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ. ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಒಳ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವಂತೆ ಮತ್ತು ಪಿಟಿಸಿಎಲ್ ಕಾಯ್ದೆಗೆ ಸುಗ್ರಿವಾಜ್ಞೆ ತರುವಂತೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.