ETV Bharat / state

'ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಕಾರಣ ದೂರು': ಕಾರವಾರದಲ್ಲಿ ಠಾಣೆಗೆ ಮುತ್ತಿಗೆ - ಅಜಯ್ ಸಿಗ್ಲಿ

ಕಾರವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಘಟಕದ ಅಧ್ಯಕ್ಷ ಅಜಯ್ ಸಿಗ್ಲಿ ಎನ್ನುವವರ ಮೇಲೆ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಉದಯ್ ಬಶೆಟ್ಟಿ ದೂರು ನೀಡಿದ್ದರು. ಆದರೆ ಅಜಯ್ ವಿರುದ್ಧ ವಿನಾಕಾರಣ ದೂರು ದಾಖಲಿಸಲಾಗಿದೆ. ಇಲ್ಲಸಲ್ಲದ ಸೆಕ್ಷನ್‌ಗಳನ್ನು ಬಳಸಿ ಪ್ರಕರಣ ದಾಖಲಿಸಿ ಮಾನಸಿಕ ಹಿಂಸೆ ಕೊಡಲು ಪೊಲೀಸರು ಮುಂದಾಗಿದ್ದಾರೆ ಎಂದು ಬಿ.ಕೆ.ಹರಿಪ್ರಸಾದ್, ಮಾಜಿ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.

karwar-congress-activists-beleaguer-on-police-station
ಠಾಣೆಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು
author img

By

Published : Jul 16, 2021, 4:43 PM IST

ಕಾರವಾರ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದ್ಯ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಠಾಣೆಗೆ ಮುತ್ತಿಗೆ ಹಾಕಿದ ಕೈ ಕಾರ್ಯಕರ್ತರು

ಕಾರವಾರ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಘಟಕದ ಅಧ್ಯಕ್ಷ ಅಜಯ್ ಸಿಗ್ಲಿ ಎನ್ನುವವರ ಮೇಲೆ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​ ಹಾಕಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಉದಯ್ ಬಶೆಟ್ಟಿ ದೂರು ನೀಡಿದ್ದರು. ಈ ದೂರಿನನ್ವಯ ನಗರ ಠಾಣೆ ಪಿಎಸ್‌ಐ ಅಜಯ್ ಸಿಗ್ಲಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಆದರೆ ಅಜಯ್ ವಿರುದ್ಧ ವಿನಾಕಾರಣ ದೂರು ದಾಖಲಿಸಲಾಗಿದೆ. ಇಲ್ಲಸಲ್ಲದ ಸೆಕ್ಷನ್‌ಗಳನ್ನು ಬಳಸಿ ಪ್ರಕರಣ ದಾಖಲಿಸಿ ಮಾನಸಿಕ ಹಿಂಸೆ ಕೊಡಲು ಪೊಲೀಸರು ಮುಂದಾಗಿದ್ದಾರೆ ಎಂದು ಬಿ.ಕೆ.ಹರಿಪ್ರಸಾದ್, ಮಾಜಿ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಪಿಎಸ್ಐ ವಿನಾಕಾರಣ ಕೇಸ್ ಬುಕ್ ಮಾಡಿದ್ದಾರೆ. ಕಾರವಾರದಲ್ಲಿ ಯಾವ ರೀತಿ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಅಜಯ್ ಸಿಗ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಪಿಎಸ್‌ಐ ಕ್ರಮ ತೆಗೆದುಕೊಳ್ಳುವ ಬದಲು ಅಜಯ್ ಸಿಗ್ಲಿ ಮೇಲೆ ಹಲ್ಲೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ತಮ್ಮ ನಿಷ್ಠೆಯನ್ನು ಸಂವಿಧಾನಕ್ಕೆ ತೋರಿಸಬೇಕು. ರಾಷ್ಟ್ರ ಧ್ವಜಕ್ಕೆ ಅವರ ನಿಷ್ಠೆ ಇರಬೇಕು. ಅದನ್ನ ಬಿಟ್ಟು ರಾಜಕಾರಣಿಗಳಿಗೆ ತೋರಿಸುವುದು ಸರಿಯಾದುದಲ್ಲ. ಪಿಎಸ್‌ಐ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಡಿಜಿಪಿ ಹಾಗೂ ಗೃಹ ಸಚಿವರಿಗೆ ದೂರು ಕೊಡಲಾಗುವುದು ಎಂದರು.

ಸರ್ಕಾರದ ಕಾರ್ಯಕ್ರಮದ ಬಗ್ಗೆ ಧ್ವನಿ ಎತ್ತಿದರೆ ಅದನ್ನ ಮಟ್ಟ ಹಾಕುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಸ್ಥಳೀಯ ಶಾಸಕರ ಒತ್ತಡಕ್ಕೆ ಪೊಲೀಸರು ಮಣಿದು ಈ ರೀತಿ ಮಾಡುತ್ತಿದ್ದಾರೆ. ಇಂತಹ ಘಟನೆಯನ್ನ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.