ETV Bharat / state

ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ - ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕುಂಬಾರವಾಡ ಪಂಚಾಯತ್

ಒಂದರಿಂದ ಐದನೇ ತರಗತಿರವರೆಗೆ ಇರುವ ಈ ಶಾಲೆಯಲ್ಲಿ ಮಕ್ಕಳೇ ತರಕಾರಿ ಹಣ್ಣು ಬೆಳೆಯುವ ಮೂಲಕ ಪರಿಸರದ ಪಠ್ಯದೊಂದಿಗೆ ಪ್ರಾಯೋಗಿಕ ಕಲಿಕೆಯನ್ನು ಕಲಿಯುತ್ತಿದ್ದಾರೆ. ಬೆಳೆದ ತರಕಾರಿಗಳನ್ನು ಬಿಸಿಯೂಟಕ್ಕೆ ಬಳಸಲಾಗುತ್ತಿದೆ. ಪೋಷಕರು ಮತ್ತು ಗ್ರಾಮಸ್ಥರ ನೆರವಿನಿಂದ ಶಾಲೆ ಉತ್ತಮವಾಗಿ ನಡೆಯುತ್ತಿದೆ. ಆದರೆ ಖಾಯಂ ಶಿಕ್ಷಕರಿಲ್ಲದ ಕೊರತೆ ಶಾಲೆಯನ್ನು ಕಾಡುತ್ತಿದೆ.

Karwar government junior primary school
ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ
author img

By

Published : Jun 5, 2022, 5:46 PM IST

ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕುಂಬಾರವಾಡ ಪಂಚಾಯತ್ ವ್ಯಾಪ್ತಿಯ ಡೇರಿಯಾ ಅನ್ನೋ ಪುಟ್ಟ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 5ನೇ ತರಗತಿಗಳು ನಡೆಯುತ್ತಿವೆ. ಈ ಶಾಲೆಯಲ್ಲಿ 18 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಶಾಲೆಗೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದು ಗಿಡವನ್ನ ನೆಟ್ಟು ಪೋಷಣೆ ಮಾಡಬೇಕು.

ಶಾಲೆಯ ವ್ಯಾಪ್ತಿಯಲ್ಲಿರುವ ಒಂದೂವರೆ ಎಕರೆ ಪ್ರದೇಶದಲ್ಲಿ ಕಳೆದ 14 ವರ್ಷದಲ್ಲಿ ಇಲ್ಲಿ ಕಲಿತ ವಿದ್ಯಾರ್ಥಿಗಳು ನೆಟ್ಟ ಮಾವು, ಹಲಸು, ತೆಂಗಿನ ಮರಗಳು ಇಂದು ಫಲ ನೀಡುತ್ತಿರುವುದಲ್ಲದೆ, ಶಾಲೆಯ ಅಂದವನ್ನು ಸಹ ಹೆಚ್ಚಿಸಿವೆ. ಶಾಲೆಯಲ್ಲಿ ಜೇನುಸಾಕಾಣಿಕೆ, ಗೆಡ್ಡೆ ಗೆಣಸು ಹಾಗೂ ತೋಟಗಾರಿಕಾ ಬೆಳೆಗಳನ್ನ ಸಹ ಬೆಳೆಯಲಾಗುತ್ತಿದೆ. ಇಲ್ಲಿ ಮಕ್ಕಳೇ ಗಿಡಗಳನ್ನು ನೆಟ್ಟು ಪೋಷಣೆ ಮಾಡುತ್ತಾರೆ. ಜೊತೆಗೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಿಗೆ ಆರೈಕೆ ಹೇಗೆ ಮಾಡಬೇಕು ಅನ್ನೋದನ್ನ ತೋರಿಸಿಕೊಡುತ್ತಾರೆ.

ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ಕಳೆದ 14 ವರ್ಷಗಳ ಹಿಂದೆ ಈ ಶಾಲೆಗೆ ಶಿಕ್ಷಕರಾಗಿ ಆಗಮಿಸಿದ್ದ ಲೀಲಾದರ್ ಮೊಗೇರ್ ಅನ್ನೋರು ಮಕ್ಕಳಿಗೆ ಕೃಷಿ ಬಗ್ಗೆ ಪಾಠ ಮಾಡುವ ಹಾಗೂ ಶಾಲೆಯಲ್ಲಿ ಮಕ್ಕಳಿಂದಲೇ ತೋಟ ನಿರ್ಮಿಸುವ ಕಾರ್ಯವನ್ನು ಮೊದಲು ಪ್ರಾರಂಭಿಸಿದ್ದರು. ಅವರು ವರ್ಗಾವಣೆಯಾಗಿ 3 ವರ್ಷಗಳಾದರೂ ಇದುವರೆಗೂ ಯಾವುದೇ ಖಾಯಂ ಶಿಕ್ಷಕರನ್ನ ಈ ಶಾಲೆಗೆ ನೇಮಿಸಿಲ್ಲ. ಓರ್ವ ಅತಿಥಿ ಶಿಕ್ಷಕರಿಂದ ಮಾತ್ರ ಸದ್ಯ ಶಾಲೆ ನಡೆಯುತ್ತಿದೆ.

ಜೊತೆಗೆ ಪೋಷಕರೂ ಸಹ ಸಾಕಷ್ಟು ಸಹಕಾರ ನೀಡುತ್ತಿದ್ದು, ಮಕ್ಕಳಿಗೆ ಕೃಷಿ ಪಾಠ ನಿರಂತರವಾಗಿರುವಂತೆ ನೋಡಿಕೊಳ್ಳಲಾಗುತ್ತಿದೆ. ಮಕ್ಕಳೇ ಬೆಳೆದ ತರಕಾರಿಗಳನ್ನ ಬಿಸಿಯೂಟಕ್ಕೆ ಬಳಸಲಾಗುತ್ತದೆ. ಅಲ್ಲದೇ ಶಾಲಾ ಆವರಣದಲ್ಲಿ ಬೆಳೆದ ಹಣ್ಣುಗಳನ್ನ ಮಕ್ಕಳಿಗೆ ನೀಡಿ, ಉಳಿದದ್ದನ್ನ ಮಾರಾಟ ಮಾಡಿ ಬಂದ ಹಣವನ್ನ ಮಕ್ಕಳಿಗಾಗೇ ಬಳಸಲಾಗುತ್ತಿದೆ. ಈ ಶಾಲೆಗೆ ಹಸಿರು ಶಾಲೆ ಎಂಬ ರಾಜ್ಯ ಪ್ರಶಸ್ತಿ ಸಹ ದೊರೆತಿದ್ದು, ಈ ಮೂಲಕ ಮಾದರಿ ಎನಿಸಿದೆ ಅಂತಾರೆ ಪಾಲಕರು.

Karwar government junior primary school
ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ಒಟ್ಟಾರೆ ಶಾಲೆ ಎಂದಾಕ್ಷಣ ಶಿಕ್ಷಕರ ಪಾಠಕ್ಕೆ ಮಾತ್ರ ಸೀಮಿತವಾಗಿರುವ ಇಂದಿನ ದಿನದಲ್ಲಿ ಮಕ್ಕಳಿಗೆ ಕೃಷಿ ಹಾಗೂ ಪರಿಸರದ ಕುರಿತು ಪ್ರಾಯೋಗಿಕವಾಗಿಯೇ ಜ್ಞಾನ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ.

ಇದನ್ನೂ ಓದಿ: ಬೆಳಗಾವಿ : ಆರ್‌ಎಲ್‌ಎಸ್ ಕಾಲೇಜಿನಲ್ಲಿ ಜಾನಪದ ಲೋಕವನ್ನೇ ಸೃಷ್ಟಿಸಿದ ವಿದ್ಯಾರ್ಥಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.