ETV Bharat / state

ಮನೆ ಬಾಗಿಲಿಗೆ ಆರೋಗ್ಯ ಸೇವೆ.. ನಾಲ್ಕು ತಿಂಗಳಿಂದ ಸಿಬ್ಬಂದಿಗಿಲ್ಲ ವೇತನ! - ಕಾರವಾರ ಆರೋಗ್ಯ ಸಿಬ್ಬಂದಿಗಳಿಗೆ ಸಿಗದ ಸಂಬಳ

ಗ್ರಾಮೀಣ ಪ್ರದೇಶಗಳಲ್ಲಿ ಓಡಾಡಿ ಜನರ ಆರೋಗ್ಯ ಸ್ಥಿತಿಯನ್ನು ಕಾಯ್ದುಕೊಳ್ಳುವಲ್ಲಿ ಶ್ರಮಿಸುತ್ತಿರುವ ಆರೋಗ್ಯ ಸಿಬ್ಬಂದಿಗೆ ವೇತನ ಸಿಗದೆ ಇರುವುದರಿಂದ ಇಂದು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಗೆ ತೆರಳಿ ಸಮಯಕ್ಕೆ ವೇತನ ನೀಡುವಂತೆ ಮನವಿ ಮಾಡಿದ್ದಾರೆ.

kn_kwr
ಆರೋಗ್ಯ ಸಿಬ್ಬಂದಿಗಳಿಗೆ ನಾಲ್ಕು ತಿಂಗಳಿಂದ ಸಿಗದ ವೇತನ
author img

By

Published : Nov 17, 2022, 8:46 PM IST

ಕಾರವಾರ: ಪ್ರತಿನಿತ್ಯ ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಸೇವೆಯನ್ನು ಕೊಡುವ ಮೂಲಕ ಜನಸಾಮಾನ್ಯರ ಆರೋಗ್ಯ ಕಾಯ್ದುಕೊಳ್ಳುವಲ್ಲಿ ಶ್ರಮಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಆರೋಗ್ಯ ಸಿಬ್ಬಂದಿಗೆ ವೇತನ ಸಿಗದೆ ಪರದಾಡುವಂತಹ ಪರಿಸ್ಥಿತಿ ಎದುರಾಗಿದ್ದು, ಜಿಲ್ಲಾ ಆರೋಗ್ಯ ಅಧಿಕಾರಿಗಳ ಬಳಿ ವೇತನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಯಾವುದೇ ವೇತನ ಸಿಗದೇ ಕಂಗಾಲಾದ ಆರೋಗ್ಯ ಸಿಬ್ಬಂದಿ ಕೊನೆಗೆ ಅಧಿಕಾರಿಗಳ ಬಳಿ ವೇತನ ನೀಡುವಂತೆ ಮನವಿ ಮಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ವಿವಿಧ 11 ತಾಲ್ಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಅಗಸ್ಟ್ ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೆಲಸ ಮಾಡಿಯೂ ವೇತನ ಸಿಗದಿರುವುದರಿಂದ ಸಂಕಷ್ಟಕ್ಕೆ ಸಿಲುಕಿರುವ ಆರೋಗ್ಯ ಸಿಬ್ಬಂದಿ ಇಂದು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಆಗಮಿಸಿದ್ದರು.

ಆರೋಗ್ಯ ಸಿಬ್ಬಂದಿಗೆ ನಾಲ್ಕು ತಿಂಗಳಿಂದ ಸಿಗದ ವೇತನ

ಆದರೆ ಆರೋಗ್ಯಾಧಿಕಾರಿಗಳು ಬೆಳಗ್ಗೆಯಿಂದ ಸಭೆಯಲ್ಲಿ ಬ್ಯುಸಿಯಾಗಿರುವ ಹಿನ್ನೆಲೆ ಸಿಬ್ಬಂದಿ ಕಚೇರಿ ಹೊರಗೆ ಬಿಸಿಲಿನಲ್ಲೇ ಕಾಯುತ್ತ ನಿಲ್ಲುವಂತಾಗಿತ್ತು. ಸಿಬ್ಬಂದಿಯಲ್ಲಿ ಬಹುತೇಕರು ಮಹಿಳೆಯರೇ ಇದ್ದು ಕುಟುಂಬ ನಿರ್ವಹಣೆಗೆ ವೇತನವನ್ನೇ ನಂಬಿಕೊಂಡಿದ್ದಾರೆ. ಇದೀಗ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗದ ಹಿನ್ನೆಲೆ ಜೀವನ ನಡೆಸುವುದು ಕಷ್ಟಕರವಾಗಿದ್ದು ಕೂಡಲೇ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

11 ತಾಲೂಕುಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 155 ಮಂದಿ ಆರೋಗ್ಯ ಸುರಕ್ಷಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅದರಲ್ಲೂ ಒಬ್ಬೊಬ್ಬರಿಗೆ ಎರಡರಿಂದ ಮೂರು ಕೇಂದ್ರಗಳ ಜವಾಬ್ದಾರಿ ವಹಿಸಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಓಡಾಟ ನಡೆಸಬೇಕಾಗಿದೆ. ಆದರೆ ಇಲಾಖೆಯಿಂದ ಓಡಾಟದ ವೆಚ್ಚ ಇತ್ಯಾದಿಗಳು ಇಲ್ಲವಾಗಿದ್ದು ಇದೀಗ ವೇತನ ಸಹ ಸಮಯಕ್ಕೆ ಸರಿಯಾಗಿ ಸಿಗದಿರುವುದರಿಂದ ಸಂಕಷ್ಟ ಅನುಭವಿಸುವಂತಾಗಿದೆ.

ಇನ್ನು, ಆರೋಗ್ಯ ಕೇಂದ್ರದ ಸಿಬ್ಬಂದಿ ಕೋವಿಡ್ ಸಂದರ್ಭದಲ್ಲೂ ಸಹ ರಜೆಯನ್ನು ಪಡೆಯದೇ ಕಾರ್ಯ ನಿರ್ವಹಿಸಿಕೊಂಡು ಬಂದಿದ್ದಾರೆ. ಇಂತಹ ಸಂದರ್ಭಗಳಲ್ಲಿ ಮೂರು ನಾಲ್ಕು ತಿಂಗಳಿಗೊಮ್ಮೆ ವೇತನ ನೀಡುತ್ತಿರುವುದರಿಂದ ದಿನನಿತ್ಯದ ಖರ್ಚು ವೆಚ್ಚಗಳನ್ನು ನಿಭಾಯಿಸಿಕೊಂಡು ಹೋಗುವುದು ಕಷ್ಟಕರವಾಗಿದೆ. ಹೀಗಾಗಿ ಪ್ರತಿ ತಿಂಗಳು ವೇತನ ಸಿಗುವಂತೆ ಅಧಿಕಾರಿಗಳು ಪ್ರಯತ್ನಿಸಿ ವ್ಯವಸ್ಥೆ ಮಾಡಿಕೊಡುವಂತೆ ಸಿಬ್ಬಂದಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಕಾಂಗ್ರೆಸ್​ ಮಾಡಿದ್ದನ್ನೇ ಈಗ ಬಿಜೆಪಿ ಮಾಡುತ್ತಿದೆ.. ಸಚಿವರ ಬೇನಾಮಿ ಹೆಸರಿನಲ್ಲಿ ಆ ಕಂಪನಿ ಇದೆ: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.