ETV Bharat / state

ಪಡಿತರ ಚೀಟಿ ತಿದ್ದುಪಡಿಗೆ ಪರದಾಟ: ತಿಂಗಳುಗಳು ಅಲೆದರೂ ವಿಲೇವಾರಿಯಾಗದ ಅರ್ಜಿಗಳು

ಕಾರವಾರದಲ್ಲಿ ಕಳೆದ ಒಂದೂವರೆ ತಿಂಗಳಿಂದ ಜಿಪಿಎಸ್ ಸರ್ವರ ಸಮಸ್ಯೆಯಿಂದಾಗಿ ಪಡಿತರ ಚೀಟಿ ವಿತರಣೆ, ಹೆಸರು ಸೇರ್ಪಡೆ ಇತ್ಯಾದಿ ಸೇವೆಗಳ ಅರ್ಜಿಗಳು ಇತ್ಯರ್ಥವಾಗದೇ ಜನ ಪರದಾಡುವಂತಾಗಿದೆ.

karwar ration card issue
ಪಡಿತರ ಚೀಟಿ ತಿದ್ದುಪಡಿಗೆ ಕಾರವಾರದಲ್ಲಿ ಪರದಾಟ
author img

By

Published : Feb 25, 2023, 11:14 AM IST

ಪಡಿತರ ಚೀಟಿ ತಿದ್ದುಪಡಿಗೆ ಕಾರವಾರದಲ್ಲಿ ಪರದಾಟ

ಕಾರವಾರ: ಸರ್ಕಾರಿ ಸೇವೆಗಳನ್ನು ತ್ವರಿತವಾಗಿ ಒದಗಿಸುವ ನಿಟ್ಟಿನಲ್ಲಿ ಬಹುತೇಕ ಇಲಾಖೆಗಳಲ್ಲಿ ಆನ್ಲೈನ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಅದರಂತೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯಲ್ಲಿ ಪಡಿತರ ಚೀಟಿ ವಿತರಣೆ, ಹೆಸರು ಸೇರ್ಪಡೆ ಇತ್ಯಾದಿ ಸೇವೆ ನೀಡಲಾಗುತ್ತದೆ. ಆದರೆ, ಕಳೆದ ಒಂದೂವರೆ ತಿಂಗಳಿಂದ ಜಿಪಿಎಸ್ ಸರ್ವರ ಸಮಸ್ಯೆಯಿಂದಾಗಿ ದಿನಕ್ಕೆ ಒಂದು ಅರ್ಜಿಯೂ ಇತ್ಯರ್ಥವಾಗದೇ ಜನ ಪರದಾಡುವಂತಾಗಿದೆ.

ಹೌದು ಸರ್ಕಾರ ವಿವಿಧ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಮತ್ತು ಜನರಿಗೆ ಅವಶ್ಯವಿರುವ ದಾಖಲಾತಿಗಳನ್ನು ಪೂರೈಸಲು ಇದೀಗ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆ ಮೂಲಕವೇ ಸರ್ಕಾರದ ವಿವಿಧ ಸೇವೆಗಳನ್ನು ನೀಡುತ್ತದೆ. ಅದರಲ್ಲಿ ಆಹಾರ ನಾಗರಿಕ‌ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆಯಿಂದಲೂ ಪಡಿತರಕ್ಕೆ ಸಂಬಂಧಿಸಿದಂತೆ ಹೊಸ ಅರ್ಜಿ ಸ್ವೀಕಾರ, ಹೊಸ ಹೆಸರು ಸೇರ್ಪಡೆ, ಹೆಸರು ಡಿಲಿಟ್ ಮಾಡುವುದು, ವಿಳಾಸ ಬದಲಾವಣೆ, ನ್ಯಾಯಬೆಲೆ ಅಂಗಡಿ ಬದಲಾವಣೆ ಸೇರಿದಂತೆ ಇತ್ಯಾದಿ ಸೇವೆಗಳನ್ನು ಒದಗಿಸಲಾಗುತ್ತದೆ.

ಸರ್ವರ್ ಸಮಸ್ಯೆಯೇ ಕಾರಣ : ಆದರೆ, ಕಳೆದ ಒಂದೂವರೆ ತಿಂಗಳಿಂದ ಕಾರವಾರ ಜನತೆಗೆ ಈ ಸೇವೆಗಳು ಧಕ್ಕದಂತಾಗಿದೆ. ನಿತ್ಯವೂ ತಹಶೀಲ್ದಾರ್ ಕಚೇರಿಗೆ ನೂರಾರು ಜನ ಅಲೆದಾಡುತ್ತಿದ್ದರೂ ದಿನಕ್ಕೊಂದು ಅರ್ಜಿಗಳು ವಿಲೇವಾರಿಯಾಗದಂತಾಗಿದೆ. ಅಧಿಕಾರಿಗಳನ್ನು ಕೇಳಿದರೆ ಸರ್ವರ್ ಸಮಸ್ಯೆ ಕಾರಣ ನೀಡಿ ಅಸಹಾಯಕತೆ ತೋಡಿಕೊಳ್ಳುತ್ತಿದ್ದು, ನಿತ್ಯ ಕೆಲಸ ಕಾರ್ಯ ಬಿಟ್ಟು ದಿನವಿಡಿ ನಿಂತರೂ ಸೇವೆ ಪಡೆಯಲು ಸಾಧ್ಯವಾಗದ ಸ್ಥಿತಿ ಇದೆ ಎನ್ನುತ್ತಾರೆ ಸಮಸ್ಯೆಗೊಳಗಾದ ರೋಹಿದಾಸ್ ವೈಂಗಣಕರ್.

ಇನ್ನು ಪಡಿತರ ಆನ್ಲೈನ್ ಸೇವೆ ಒದಗಿಸುವ ಸಂಬಂಧ ಎನ್ ಐಸಿ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಈ ಹಿಂದೆ ದಿನವೊಂದಕ್ಕೆ 70 ಅರ್ಜಿಗಳವರೆಗೆ ವಿಲೇವಾರಿ ಆಗುತಿತ್ತು. ಆದರೆ, ಇದೀಗ ಒಂದು - ಎರಡು ಅರ್ಜಿ ಮಾತ್ರ ವಿಲೇವಾರಿಯಾಗುತ್ತಿದೆ. ಇದರಿಂದ ಜನಸಾಮಾನ್ಯರು ನಿತ್ಯವೂ ಪರದಾಡಬೇಕಾಗಿದೆ. ಇನ್ನು ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಸರ್ಕಾರ ಎನ್ ಐಸಿ ಕಂಪನಿಗೆ ಗುತ್ತಿಗೆ ನೀಡಿದ್ದು ಅವರು ನಿರ್ವಹಣೆ ಮಾಡುತ್ತಿದ್ದಾರೆ. ಇದರಿಂದ ಜಿಪಿಎಸ್ ಸರ್ವರ್ ಸಮಸ್ಯೆ ಎದುರಾಗಿದೆ.

ಪೆಂಡಿಂಗ್​ ಇದೆ 400 ಕ್ಕೂ ಹೆಚ್ಚು ಅರ್ಜಿಗಳು: ಈಗಾಗಲೇ ಸಮಸ್ಯೆಯನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ಆಯುಕ್ತರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿಯೇ ಬಗೆಹರಿಸುವ ಭರವಸೆ ನೀಡಿದ್ದರು. ಇನ್ನೊಂದು ವಾರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು. ಇದೀಗ ಪೆಂಡಿಗ್ ಇರುವ 400 ಕ್ಕೂ ಹೆಚ್ಚು ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಹಶೀಲ್ದಾರ್ ಶ್ರೀದೇವಿ ಭಟ್ ಭರವಸೆ ನೀಡಿದ್ದಾರೆ. ಒಟ್ಟಾರೆ ಆಗಾಗ ಕೈಗೊಡುವ ಆನ್ಲೈನ್ ಸೇವೆ ಸಮಸ್ಯೆಯಿಂದಾಗಿ ಜನಸಾಮಾನ್ಯರು ಹೈರಾಣಾಗುವಂತಾಗಿದೆ. ಸಣ್ಣ ಕೆಲಸಕ್ಕೆ ಮೂರ್ನಾಲ್ಕು ದಿನ ಕಚೇರಿ ಅಲೆಯುವ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಿದೆ.

ಇದನ್ನೂ ಓದಿ: ಬಡವರ ಸಂಕಷ್ಟ ನಿವಾರಣೆಗೆ ಪಂಚ ಯೋಜನೆ ಜಾರಿ : ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.