ETV Bharat / state

ಭಟ್ಕಳ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪ್ರಯಾಣಿಕನಿಗೆ ಗಂಭೀರ ಗಾಯ - Etv Bharath kannada news

ಭಟ್ಕಳ ತಾಲೂಕಿನ ಶಿರಾಲಿ ಬುಡ್ಡಕುಳಿಯಲ್ಲಿ ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಭಟ್ಕಳ
ಭಟ್ಕಳ
author img

By

Published : Aug 28, 2022, 5:39 PM IST

ಭಟ್ಕಳ(ಉತ್ತರ ಕನ್ನಡ): ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶಿರಾಲಿ ಬಡ್ಡುಕುಳಿಯಲ್ಲಿ ನಡೆದಿದೆ.

ಪ್ರಥಮ ಚಿಕಿತ್ಸೆ: ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಹರಿಕೃಷ್ಣ ಪಿ ಎಂದು ಗುರುತಿಸಲಾಗಿದ್ದು, ಇವರು ಕೇರಳ ಮೂಲದ ಕೊಲ್ಲಂ ಕಡೆಯವರು ಎಂದು ತಿಳಿದು ಬಂದಿದೆ. ಇವರು ನೇತ್ರಾವತಿ ಎಕ್ಸ್​ಪ್ರೆಸ್​ ರೈಲಿನಲ್ಲಿ ಮುಂಬೈನಿಂದ ಕೇರಳದ ಕೊಲ್ಲಂ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಶಿರಾಲಿಯ ಬಡ್ಡುಕುಳಿ ಬದ್ದುಕುಳಿ ಸಮೀಪ ಆಯತಪ್ಪಿ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂತರ ಅಲ್ಲಿನ ಸ್ಥಳೀಯರು 108ರ ಆ್ಯಂಬುಲೆನ್ಸ್ ಮೂಲಕ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಹೈಟೆಕ್ ಆಸ್ಪತ್ರೆಗೆ ಸಾಗಿಸಿದ್ದಾರೆ.

ಹೈಟೆಕ್ ಆಸ್ಪತ್ರೆಗೆ ದಾಖಲು: ಘಟನೆ ಬಗ್ಗೆ ಮಾಹಿತಿ ತಿಳಿದು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದ ರೈಲ್ವೆ ಆರ್​ಪಿಎಫ್​ ಜಸ್ಟಿನ್ ಗಾಯಗೊಂಡ ವ್ಯಕ್ತಿ ಬಗ್ಗೆ ಮಾಹಿತಿ ಕಲೆಹಾಕಿ ಆ ವ್ಯಕ್ತಿಯ ಕುಟುಂಬದವರಿಗೆ ಮಾಹಿತಿ ತಿಳಿಸಿದ್ದಾರೆ. ಭಟ್ಕಳದ ಸಮಾಜ ಸೇವಕ ಮಂಜು ನಾಯ್ಕ ಮುಟ್ಟಳ್ಳಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಉಡುಪಿ ಹೈಟೆಕ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

ಓದಿ: ಅಮೃತ ಸರೋವರ ಯೋಜನೆಯಡಿ ಆಕರ್ಷಕ ಕೆರೆ ನಿರ್ಮಾಣ.. ಮನ್​ ಕಿ ಬಾತ್​ನಲ್ಲಿ ಪ್ರಧಾನಿ ಶ್ಲಾಘನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.