ಕಾರವಾರ(ಉತ್ತರ ಕನ್ನಡ) : ಕಾಂಗ್ರೆಸ್ ಸರ್ಕಾರ ಇದ್ದಾಗ 23 ಕಾರ್ಯಕರ್ತರ ಹತ್ಯೆಯಾಗಿತ್ತು. ಆ ಸಂದರ್ಭದಲ್ಲಿ ಕೆಲ ಕ್ರೂರ ಆರೋಪಿಗಳನ್ನು ಬಂಧಿಸದೇ ಬಿಟ್ಟಿದ್ದರಿಂದಲೇ ಇಂತಹ ಅನಾಹುತಗಳು ಮುಂದುವರೆಯುತ್ತಿವೆ. ಸಿಬಿಐಗೆ ಕೊಟ್ಟಿರುವ ಪ್ರಕರಣಗಳು ವಿಳಂಬವಾಗಿವೆ. ಇದನ್ನು ಹೊರತುಪಡಿಸಿದರೆ ನಮ್ಮ ಸರ್ಕಾರ ಹತ್ಯೆ ಮಾಡಿದ ಎಲ್ಲ ಆರೋಪಿಗಳನ್ನು ಬಂಧಿಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಕಾರವಾರದಲ್ಲಿ ಪ್ರವೀಣ ನೆಟ್ಟಾರು ಹತ್ಯೆ ಆರೋಪಿಗಳ ಬಂಧನ ವಿಳಂಬದ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳ ಬಗ್ಗೆ ಪ್ರಾಥಮಿಕ ಸುಳಿವಿದೆ. ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪ್ರಕರಣದ ತನಿಖೆ ದಿಕ್ಕು ತಪ್ಪಿಲ್ಲ. ಸರಿಯಾದ ದಿಕ್ಕಿನಲ್ಲೇ ಸಾಗುತ್ತಿದೆ. ಶೀಘ್ರದಲ್ಲಿಯೇ ಬಂಧನ ಮಾಡಲಿದ್ದಾರೆ ಎಂದರು.
ಇದೇ ವೇಳೆ, ಯಡಿಯೂರಪ್ಪನವರನ್ನು ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ನಾಯಕತ್ವದಲ್ಲಿ ನಮ್ಮ ಸರ್ಕಾರ ಬಂದಿದ್ದು, ಮುಂದೆಯು ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಗೆ ಹೋಗಿ ಗೆಲುವು ಸಾಧಿಸುತ್ತದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ತನಿಖೆ ಎನ್‌ಐಎಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ