ಕಾರವಾರ: ಪೊಲೀಸ್ ಠಾಣೆಗಳಿಗೆ ಕಲ್ಲು ಹೊಡೆಯುವುದು, ಬೆಂಕಿ ಹಚ್ಚುವುದು ಮಾಡುವವರನ್ನು ಯಾರೂ ಮುಗ್ಧರ ವ್ಯಾಪ್ತಿಯಲ್ಲಿ ಸೇರಿಸುವುದಿಲ್ಲ. ಯಾರೆಲ್ಲಾ ಇಂತಹವರನ್ನು ಮುಗ್ಧರು ಅಂತಾರೆ ಅವರೇ ಮುಗ್ಧರು. ಯಾರು ಕಲ್ಲು ಹೊಡೆಯುತ್ತಾರೆ, ಅಮಾಯಕರ ಮೇಲೆ ದೌರ್ಜನ್ಯ ಮಾಡುತ್ತಾರೆ, ಬೆಂಕಿ ಹಚ್ಚುತ್ತಾರೆ, ಅಂತಹವರನ್ನು ನಿರ್ಬಂಧಿಸುವ ತಾಕತ್ತು ಸರ್ಕಾರಕ್ಕೆ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಕಾರವಾರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜೆ ಹಳ್ಳಿ, ಡಿಜೆ ಹಳ್ಳಿ ಸೇರಿದಂತೆ ಹುಬ್ಬಳ್ಳಿಯಲ್ಲಿ ಯಾರು ಪೊಲೀಸರ ಮೇಲೆ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಚುನಾವಣೆ ಸ್ಪರ್ಧಿಸುವ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಯ ಸಾಧು-ಸಂತರು ಕೇಂದ್ರದ ಆಡಳಿತ ಮೆಚ್ಚಿದ್ದಾರೆ. ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳು ಪಕ್ಷಕ್ಕೆ ಶುಭವಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಆರ್ಎಸ್ಎಸ್-ಎಸ್‌ಡಿಪಿಐ ಹೋಲಿಕೆ ಸಿದ್ದರಾಮಯ್ಯನವರ ಬೌದ್ಧಿಕ ದಿವಾಳಿತನ: ಸಚಿವ ಜೋಶಿ