ಕಾರವಾರ: ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ದಂಪತಿ ಹಾಗೂ ಮಗುವನ್ನು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸೇರಿಸಲು ನೆರವಾಗಿರುವ ಘಟನೆ ಕುಮಟಾದಲ್ಲಿ ನಡೆದಿದೆ.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಮಟಾ ಪಟ್ಟಣದ ದಂಪತಿಗಳಿಬ್ಬರು ಮಗುವಿನೊಂದಿಗೆ ಬೈಕ್ ಮೂಲಕ ತೆರಳುವಾಗ ನಾಯಿ ಅಡ್ಡ ಬಂದ ಪರಿಣಾಮ ಬಿದ್ದು ಗಾಯಗೊಂಡಿದ್ದರು. ಅದೇ ಹೊತ್ತಿಗೆ ಉಡುಪಿಯಿಂದ ಶಿರಸಿಯ ಸ್ವರ್ಣವಲ್ಲಿ ಮಠದಲ್ಲಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾರನ್ನು ನಿಲ್ಲಿಸಿ ವಿಚಾರಿಸಿದ್ದಾರೆ.
ಉದಾ: ಒಂದು ತಿಂಗಳವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ..!
ಅನಂತರ ತಮ್ಮದೇ ಕಾರಿನಲ್ಲಿ ಗಾಯಗೊಂಡವರನ್ನು ಹೊಳೆಗದ್ದೆ ಟೋಲ್ಗೇಟ್ವರೆಗೆ ಕೊಂಡೊಯ್ದು, ಅಲ್ಲಿನ ಆಂಬುಲೆನ್ಸ್ ಮೂಲಕ ಕುಮಟಾದ ಸರ್ಕಾರಿ ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಿದ್ದಾರೆ. ಸಮಯಕ್ಕೆ ಸರಿಯಾಗಿ ಗಾಯಾಳುಗಳನ್ನು ಆಸ್ಪತ್ರೆ ಸೇರಿಸಲು ನೆರವಾದ ಸಚಿವರ ಮಾನವೀಯತೆಗೆ ಇದೀಗ ಮೆಚ್ಚುಗೆ ವ್ಯಕ್ತವಾಗಿದೆ.