ಕಾರವಾರ: ನಿರ್ಮಾಣ ಹಂತದ ಬಹು ಮಹಡಿ ಕಟ್ಟಡದಿಂದ ಬಿದ್ದು ಕೂಲಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಿನ್ನೆ ನಡೆದಿದೆ.
ಕಾರವಾರದ ಶೇಜವಾಡ ಮೂಲದ ನಿಲೇಶ ಮಾಹೇಕರ್ ಮೃತ ವ್ಯಕ್ತಿ.
ನಗರದ ಗ್ರೀನ್ ಸಿಟ್ ಬಳಿ ನಿರ್ಮಾಣ ಹಂತದ ಬಹುಮಡಿ ಕಟ್ಟಡದಲ್ಲಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಆಯತಪ್ಪಿ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಗೋವಾ ಬಾಂಬೋಲಿ ಆಸ್ಪತ್ರೆಗೆ ರವಾನಿಸುವಾಗ ದಾರಿಯ ಮಧ್ಯೆ ಮೃತಪಟ್ಟಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ.