ಕಾರವಾರ: ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಕಾರ್ಮಿಕನೋರ್ವ ಹಳಿ ದಾಟುವಾಗ ರೈಲು ಬಡಿದು ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಮೂಲತಃ ಕರ್ಕಿಯ ಹೊರೆಸಾಲ ಮೂಲದ ಹೊನ್ನಪ್ಪ ಆಚಾರಿ (58) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಕಾರವಾರ ಕಡೆ ತೆರಳುತ್ತಿದ್ದ ರೈಲು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ: ರೈಲ್ವೆ ಹಳಿ ಬಳಿ ಯುವಕನ ಶವ ಪತ್ತೆ